ADVERTISEMENT

ಕಾವೇರಿ ನೀರು ಹಂಚಿಕೆ ಸುಪ್ರೀಂ ತೀರ್ಪು, ಕೇಂದ್ರದ ‘ಸ್ಕೀಂ’ಗೆ ಅಸ್ತು

ಸಿದ್ದಯ್ಯ ಹಿರೇಮಠ
Published 18 ಮೇ 2018, 9:16 IST
Last Updated 18 ಮೇ 2018, 9:16 IST
ಕೆಆರ್‌ಎಸ್ (ಸಂಗ್ರಹ ಚಿತ್ರ)
ಕೆಆರ್‌ಎಸ್ (ಸಂಗ್ರಹ ಚಿತ್ರ)   

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ಶುಕ್ರವಾರ ಹೊರಬಂದಿದೆ.

ನಾಲ್ಕು ರಾಜ್ಯಗಳ ನಡುವೆ ನದಿ ನೀರು ಹಂಚಿಕೆ ಸಂಬಂಧ ಕೇಂದ್ರ ಸರ್ಕಾರ ರೂಪಿಸಿರುವ ಪರಿಷ್ಕೃತ ಯೋಜನೆಯನ್ನು (ಸ್ಕೀಂ) ಮುಂಗಾರು ಹಂಗಾಮಿಗೆ ಮೊದಲೇ ಜಾರಿ ಮಾಡಲು ತೀರ್ಪು ಸೂಚಿಸಿದೆ.

ಮುಂಗಾರಿಗೆ ಮೊದಲೇ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಕಾರ್ಯಾರಂಭ ಮಾಡಬೇಕು ಎಂದು ಸೂಚಿಸಿರುವ ನ್ಯಾಯಾಲಯವು, ಮಂಡಳಿ ಮಾದರಿಯ ಪ್ರಾಧಿಕಾರ ಬೇಡ ಎಂದು ರಾಜ್ಯ ಸಲ್ಲಿಸಿದ್ದ ಆಕ್ಷೇಪಣೆಯನ್ನು ತಳ್ಳಿಹಾಕಿತು.

ADVERTISEMENT

ನ್ಯಾಯಮೂರ್ತಿ ಎ.ಎಂ. ಖನ್ವಿಲ್ಕರ್ ಮಧ್ಯಾಹ್ನ 2 ಗಂಟೆಗೆ ತೀರ್ಪು ಓದಿದರು. ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ಈ ತೀರ್ಪು ನೀಡಿದೆ.

ನದಿ ನೀರು ಹಂಚಿಕೆ ವಿಚಾರದಲ್ಲಿ ಪ್ರಾಧಿಕಾರಕ್ಕೆ ಸಂಪೂರ್ಣ ಅಧಿಕಾರ ಇರಬೇಕು ಎಂಬ ಪುದುಚೇರಿಯ ಬೇಡಿಕೆಯನ್ನು ಕೋರ್ಟ್ ಪುರಸ್ಕರಿಸಿದೆ. ಜಲಾಶಯಗಳು ಆಯಾ ರಾಜ್ಯಗಳ ಸುಪರ್ದಿಯಲ್ಲಿಯೇ ಇರಲಿವೆ.

ಕೇಂದ್ರ ಸರ್ಕಾರ ರೂಪಿಸಿರುವ ಪರಿಷ್ಕೃತ ಯೋಜನೆಯು (ಸ್ಕೀಂ) ನೀರು ಹಂಚಿಕೆ ಸಂಬಂಧ ಪ್ರತಿದಿನ ಹರಿದು ಹೋದ ನೀರಿನ ಮಾಹಿತಿಯನ್ನು ತಿಂಗಳಿಗೊಮ್ಮೆ ಸಂಗ್ರಹಿಸಲು ಪ್ರಾಧಿಕಾರಕ್ಕೆ ಅವಕಾಶ ಮಾಡಿಕೊಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.