ADVERTISEMENT

ಕಾವೇರಿ ಮಧ್ಯಸ್ಥಿಕ ಸಭೆ ಆರಂಭ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2016, 9:14 IST
Last Updated 29 ಸೆಪ್ಟೆಂಬರ್ 2016, 9:14 IST
ಕಾವೇರಿ ಮಧ್ಯಸ್ಥಿಕ ಸಭೆ ಆರಂಭ
ಕಾವೇರಿ ಮಧ್ಯಸ್ಥಿಕ ಸಭೆ ಆರಂಭ   

ನವಹೆದಲಿ: ಕರ್ನಾಟಕ ಮತ್ತು ತಮಿಳುನಾಡುಗಳ ನಡುವಿನ ಕಾವೇರಿ ನೀರು ಹಂಚಿಕೆ ಬಿಕ್ಕಟ್ಟು ಪರಿಹರಿಸುವ ನಿಟ್ಟಿನಲ್ಲಿ ಸುಪ್ರೀಂಕೋರ್ಟ್ ಸೂಚನೆ ಮೇರೆಗೆ ಕೇಂದ್ರ ಸರ್ಕಾ ರದ ಮಧ್ಯಸ್ಥಿಕೆಯಲ್ಲಿ ಸಭೆ ಆರಂಭವಾಗಿದೆ. ಸಭೆಯ ನೇತತ್ವವನ್ನು ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾ ಭಾರತಿ ವಹಿಸಿದ್ದಾರೆ.

ರಾಜ್ಯದ ಪರ ಸಿದ್ದರಾಮಯ್ಯ, ಸಚಿವ ಎಂ.ಬಿ. ಪಾಟೀಲ, ಸರ್ಕಾರದ ಮುಖ್ಯ ಕಾರ್ಯ ದರ್ಶಿ ಅರವಿಂದ ಜಾಧವ್‌, ಜಲಸಂಪ ನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶ ಸಿಂಗ್‌ ಭಾಗವಹಿಸಿದ್ದಾರೆ.

ತಮಿಳುನಾಡು ಪರವಾಗಿ  ಲೋಕೋಪಯೋಗಿ ಸಚಿವ ಈಡಪ್ಪಾಡಿ ಪಳನಿಸ್ವಾಮಿ, ಮುಖ್ಯ ಕಾರ್ಯ ದರ್ಶಿ ರಾಮಮೋಹನ ರಾವ್ ಪಾಲ್ಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.