ADVERTISEMENT

ಕಾವೇರಿ ವಿವಾದ: ತಮಿಳುನಾಡಿಗೆ ಕೇಂದ್ರ ನಿಯೋಗ ಭೇಟಿ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2012, 9:30 IST
Last Updated 4 ಅಕ್ಟೋಬರ್ 2012, 9:30 IST

ಚೆನ್ನೈ (ಪಿಟಿಐ): ಕರ್ನಾಟಕದಲ್ಲಿ `ಕಾವೇರಿ~ ಪ್ರತಿಭಟನೆಯ ಕಾವು ದಿನದಿಂದ ದಿನಕ್ಕೆ ಏರುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳಲ್ಲಿನ ವಸ್ತು ಸ್ಥಿತಿಯನ್ನು ಅಧ್ಯಯನ ಮಾಡಲು ಕೇಂದ್ರದಿಂದ ಆಗಮಿಸಿರುವ ಕೇಂದ್ರ ಪರಿಶೀಲನಾ ತಂಡವು ಗುರುವಾರ ತಮಿಳುನಾಡಿನ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ  ಚರ್ಚಿಸಿ, ಇನ್ನು ನಾಲ್ಕು ದಿನಗಳೊಳಗೆ ಕೇಂದ್ರ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಲಾಗುವುದು ಎಂದು ತಿಳಿಸಿತು.

ಕೇಂದ್ರ ಜಲಸಂಪನ್ಮೂಲ ಕಾರ್ಯದರ್ಶಿ ಡಿ.ವಿ. ಸಿಂಗ್ ಅವರ ಮುಂದಾಳತ್ವದ ತಂಡವು ತಮಿಳುನಾಡು ಸರ್ಕಾರದ ಮುಖ್ಯ ಕಾರ್ಯದರ್ಶಿ ದೇಬೇಂದ್ರನಾಥ ಸಾರಂಗಿ ಮತ್ತು ಇತರೆ ಹಿರಿಯ ಅಧಿಕಾರಿಗಳೊಂದಿಗೆ ಪ್ರಸ್ತುತ ಕಾವೇರಿ ನದಿ ನೀರಿನ ಬಗ್ಗೆ ಚರ್ಚಿಸಿದರು. ಇದೇ ಸಂದರ್ಭದಲ್ಲಿ ಪ್ರಸ್ತುತ ಜಲಾಶಯದ ಮಟ್ಟ ಹಾಗೂ ಕಾವೇರಿ ನದಿ ನೀರಿನ ಮೇಲೆ ಅವಲಂಬಿತವಾಗಿರುವ ಬೆಳೆಗಳ ಸ್ಥಿತಿಯ ಕುರಿತು ಚರ್ಚಿಸಿದರು.

`ಇಲ್ಲಿನ ಕಾವೇರಿ ಜಲನಯನ ಪ್ರದೇಶಕ್ಕೆ ತಂಡವು ಭೇಟಿ ನೀಡಿದ್ದು, ರಾಜ್ಯದಲ್ಲಿ ಕಾವೇರಿ ನದಿ ನೀರನ್ನು ಅವಲಂಬಿಸಿರುವ ಬೆಳೆಗಳ ಸ್ಥಿತಿ ಹಾಗೂ ಕಾವೇರಿ ನೀರಿನ ಜಲಾಶಯದ ಮಟ್ಟದ ಬಗ್ಗೆ ರಾಜ್ಯದ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಈ ಬಗ್ಗೆ ಇನ್ನು ನಾಲ್ಕು ದಿನಗಳಲ್ಲಿಯೇ ಕೇಂದ್ರ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಲಾಗುವುದು~ ಎಂದು ಸಿಂಗ್ ಸುದ್ದಿಗಾರರಿಗೆ ತಿಳಿಸಿದರು.

`ಎರಡು ರಾಜ್ಯಗಳ ಪ್ರಸ್ತುತ  `ಕಾವೇರಿ~ ವಿವಾದದ ಕುರಿತು ವಸ್ತು ಸ್ಥಿತಿ ವೀಕ್ಷಣೆ ಹಾಗೂ ಪರೀಶಿಲನೆಗಾಗಿ ಎರಡು ದಿನಗಳ ಭೇಟಿಗಾಗಿ ಆಗಮಿಸಿರುವ ಕೇಂದ್ರ ತಂಡವು ಕರ್ನಾಟಕಕ್ಕೂ ಭೇಟಿ ನೀಡಿ ಅಲ್ಲಿನ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿ ನಡೆಸಲಿದೆ~ ಎಂದು ತಂಡದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT