ADVERTISEMENT

ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ: ಶಾಂತಿಯುತ ಮಾತುಕತೆ ಮುಂದುವರೆಯಲಿದೆ- ಸಿಂಗ್

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2013, 10:17 IST
Last Updated 26 ಸೆಪ್ಟೆಂಬರ್ 2013, 10:17 IST
ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ: ಶಾಂತಿಯುತ ಮಾತುಕತೆ ಮುಂದುವರೆಯಲಿದೆ- ಸಿಂಗ್
ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ: ಶಾಂತಿಯುತ ಮಾತುಕತೆ ಮುಂದುವರೆಯಲಿದೆ- ಸಿಂಗ್   

ವಾಷಿಂಗ್ಟನ್ (ಪಿಟಿಐ): ಜಮ್ಮು  ಮತ್ತು ಕಾಶ್ಮೀರದಲ್ಲಿ ಪೊಲೀಸ್ ಠಾಣೆ ಮತ್ತು ಸೇನಾ ನೆಲೆಗಳ ಮೇಲಿನ ಉಗ್ರರ ದಾಳಿಯನ್ನು ಖಂಡಿಸಿರುವ ಪ್ರಧಾನಿ ಮನಮೋಹನ್ ಸಿಂಗ್ ಅವರು ಪಾಕ್ ಪ್ರಧಾನಿ ನವಾಜ್ ಷರೀಪ್ ಅವರೊಂದಿಗೆ ನಡೆಯಲಿರುವ ಶಾಂತಿಯುತ ಮಾತುಕುತೆ ಮುಂದುವರೆಯಲಿದೆ ಎಂದು ಗುರುವಾರ ಸ್ಪಷ್ಟಪಡಿಸಿದ್ದಾರೆ.

ಘಟನೆಯನ್ನು ಖಂಡಿಸಿ ಹೇಳಿಕೆ ನೀಡಿರುವ ಪ್ರಧಾನಿ ಮನಮೋಹನ್ ಸಿಂಗ್ `ಗಡಿಯಲ್ಲಿ ಉಗ್ರರು ನಡೆಸಿರುವ ದಾಳಿ ಖಂಡನೀಯ, ಉಗ್ರರಿಗೆ ದಾಳಿ ನಡೆಸಲು ಯಾರು ಕುಮ್ಮಕ್ಕು ನೀಡುತ್ತಿದ್ದಾರೆ ಎಂಬುದು ಜಗತ್ತಿಗೆ ಗೊತ್ತಿರುವ ಸಂಗತಿ. ನವಾಜ್ ಷರೀಪ್ ಅವರೊಂದಿಗಿನ ಶಾಂತಿಯುತ ಮಾತುಕತೆ ಮುಂದವರೆಯಲಿದೆ' ಎಂದು  ತಿಳಿಸಿದ್ದಾರೆ.

ಉಗ್ರರ ದಾಳಿ ಹಿನ್ನೆಲೆಯಲ್ಲಿ ಮಾತುಕತೆಯನ್ನು ನಿಲ್ಲಿಸುವುದರಲ್ಲಿ ಅರ್ಥವಿಲ್ಲ, ಆದರೂ ನಾವು ಶಾಂತಿಯುತ ಹೋರಾಟವನ್ನು ಮುಂದುವರೆಸಲಿದ್ದೇವೆ ಎಂದು ಸಿಂಗ್ ತಿಳಿಸಿದ್ದಾರೆ.

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಗವಹಿಸಲು ಅಮೆರಿಕಗೆ ತೆರಳಿರುವ ಸಿಂಗ್ ಅಲ್ಲಿ ಪಾಕ್ ಪ್ರಧಾನಿ ನವಾಜ್ ಷರೀಪ್ ಅವರೊಂದಿಗೆ ಶಾಂತಿಯುತ ಮಾತುಕತೆ ನಡೆಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.