ADVERTISEMENT

ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ: ಒಬ್ಬ ಉಗ್ರನ ಹತ್ಯೆ

ಏಜೆನ್ಸೀಸ್
Published 29 ಅಕ್ಟೋಬರ್ 2017, 4:47 IST
Last Updated 29 ಅಕ್ಟೋಬರ್ 2017, 4:47 IST
ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ: ಒಬ್ಬ ಉಗ್ರನ ಹತ್ಯೆ
ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ: ಒಬ್ಬ ಉಗ್ರನ ಹತ್ಯೆ   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರ್ ಸಮೀಪದ ಹಜೀನ್ ಪ್ರದೇಶದಲ್ಲಿ ಭಾರತೀಯ ಸೇನೆ ನಡೆಸಿದ ಕಾರ್ಯಾಚರಣೆಯಲ್ಲಿ ಲಷ್ಕರ್ –ಎ –ತಯಬಾ  ಸಂಘಟನೆಯ ಒಬ್ಬ ಉಗ್ರನನ್ನು ಸೇನಾಪಡೆ ಹೊಡೆದುರುಳಿಸಿದೆ.

ಉಗ್ರರು ಹಜೀನ್‌ ಪ್ರದೇಶದಲ್ಲಿ ಅಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸೇನಾ ಪಡೆ ಸ್ಥಳೀಯ ಪೊಲೀಸರ ನೆರವಿನಿಂದ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಉಗ್ರರು ಸೇನಾ ಪಡೆಯ ಮೇಲೆ ಪ್ರತಿ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರೆಸಲಾಗಿದೆ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.