ADVERTISEMENT

ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ಮುಂದುವರಿಕೆ: ರಾವತ್‌

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2017, 19:30 IST
Last Updated 25 ಅಕ್ಟೋಬರ್ 2017, 19:30 IST

ನವದೆಹಲಿ: ಕಾಶ್ಮೀರ ಬಿಕ್ಕಟ್ಟಿಗೆ ಪರಿಹಾರ ಕಂಡು ಹಿಡಿಯುವ ಸಲುವಾಗಿ ಸಂಧಾನಕಾರರನ್ನು ನೇಮಿಸಿರುವುದು ಕಣಿವೆ ರಾಜ್ಯದಲ್ಲಿ ನಡೆಯುತ್ತಿರುವ ಸೇನಾ ಕಾರ್ಯಾಚರಣೆ ಮೇಲೆ ಯಾವುದೇ ಪರಿಣಾಮ ಬೀರದು ಎಂದು ಸೇನಾ ಮುಖ್ಯಸ್ಥ ಬಿ‍ಪಿನ್‌ ರಾವತ್‌ ಬುಧವಾರ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದ ಸರ್ಕಾರದ ಈಗಿನ ನೀತಿಯು ರಾಜ್ಯದ ಒಟ್ಟಾರೆ ಪರಿಸ್ಥಿತಿಯನ್ನು ಸುಧಾರಿಸಲು ನೆರವಾಗಿದೆ ಎಂದು ಅವರು ಹೇಳಿದ್ದಾರೆ.

ಹುರಿಯತ್‌ ಮುಖಂಡರ ಭೇಟಿ: ಈ ಮಧ್ಯೆ, ಮುಂದಿನ ವಾರ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದಾಗ ಹುರಿಯತ್‌ ಕಾನ್ಫರೆನ್ಸ್‌ ಮುಖಂಡರ ಜೊತೆ ಮಾತುಕತೆ ನಡೆಸುವುದಾಗಿ ಸಂಧಾನಕಾರ ದಿನೇಶ್ವರ್ ಶರ್ಮಾ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.