ಜಮ್ಮು (ಐಎಎನ್‌ಎಸ್): ಈಚೆಗೆ ನಡೆದ ಸಭೆಯೊಂದರಲ್ಲಿ ಕಾಶ್ಮೀರ ಜನರ ಕುರಿತು ಕೇಂದ್ರ ಸಚಿವ ಫಾರೂಕ್ ಅಬ್ದುಲ್ಲ ಮಾಡಿರುವ ಟೀಕೆಗೆ ಸೋಮವಾರ ರಾಜ್ಯ ವಿಧಾನಸಭೆಯಲ್ಲಿ ತೀವ್ರ ಕೋಲಾಹಲ ಉಂಟಾಯಿತ್ತು.
ವಿರೋಧ ಪಕ್ಷ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಅಧ್ಯಕ್ಷೆ ಮೆಹಬೂಬಾ ಮುಫ್ತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕಣಿವೆಯಲ್ಲಿ ಈಚೆಗೆ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಫಾರೂಕ್, ಮೀಟರ್ ತಪ್ಪಿಸಿ ವಿದ್ಯುತ್ ಕಳವು ಮಾಡುತ್ತಿರುವ ಪ್ರಕರಣಗಳನ್ನು ಪ್ರಸ್ತಾಪಿಸಿ ‘ಕಾಶ್ಮೀರಿಗಳು ಬರಿ ಕಳ್ಳರಲ್ಲ, ಮಹಾ ಕಳ್ಳರು’ ಎಂದು ಟೀಕಿಸಿದ್ದರು.
ಆಡಳಿತಾರೂಢ ನ್ಯಾಷನಲ್ ಕಾನ್‌್ಫರೆನ್‌್ಸ ಭ್ರಷ್ಟಾಚಾರದಲ್ಲಿ ಮುಳುಗಿದೆ. ಕಾಶ್ಮೀರಿಗಳನ್ನು ಕಳ್ಳರು ಎಂದು ಕರೆಯುವುದಕ್ಕೆ ಅವರಿಗೆ ನಾಚಿಕೆಯಾಗುವುದಿಲ್ಲವೆ?’ ಎಂದು ಮುಫ್ತಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.