ADVERTISEMENT

ಕಾಶ್ಮೀರ: ಎನ್‌ಕೌಂಟರ್‌ನಲ್ಲಿ ಗುರುತುಸಿಗದ ಉಗ್ರನ ಹತ್ಯೆ

ಪಿಟಿಐ
Published 3 ಜುಲೈ 2017, 5:58 IST
Last Updated 3 ಜುಲೈ 2017, 5:58 IST
ಕಾಶ್ಮೀರ: ಎನ್‌ಕೌಂಟರ್‌ನಲ್ಲಿ ಗುರುತುಸಿಗದ ಉಗ್ರನ ಹತ್ಯೆ
ಕಾಶ್ಮೀರ: ಎನ್‌ಕೌಂಟರ್‌ನಲ್ಲಿ ಗುರುತುಸಿಗದ ಉಗ್ರನ ಹತ್ಯೆ   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಸೋಮವಾರ ಭದ್ರತಾಪಡೆ ನಡೆಸಿದ ಎನ್‌ಕೌಂಟರ್‌ನಲ್ಲಿ ಗುರುತು ಸಿಗದ ಒಬ್ಬ ಉಗ್ರನನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಪುಲ್ವಾಮದ ಬಲ್ಮೌವಲಯಲ್ಲಿ ಉಗ್ರರು ಇರುವ ಬಗ್ಗೆ ಲಭ್ಯವಾದ ಮಾಹಿತಿ ಮೆರೆಗೆ ಭದ್ರತಾ ಸಿಬ್ಬಂದಿ ಬೆಳಿಗ್ಗೆ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ ಎಂದು ಪೊಲೀಸ್‌ ವಕ್ತಾರರು ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಒಬ್ಬ ಉಗ್ರನನ್ನು ಹೊಡೆದುರುಳಿಸಲಾಗಿದೆ, ಉಗ್ರರಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಅವರು ಹೇಳಿದ್ದಾರೆ.

ADVERTISEMENT

ಹತ್ಯೆಯಾಗಿರುವ ಉಗ್ರನ ಗುರುತು ಪತ್ತೆ ಸಧ್ಯಕ್ಕೆ ಸಾಧ್ಯವಾಗಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.