ಶ್ರೀನಗರ: ಜೈಷ್ ಎ ಮೊಹಮ್ಮದ್ (ಜೆಇಎಂ) ಸಂಘಟನೆಗೆ ಸೇರಿದ ಉಗ್ರನ ಮೃತದೇಹ ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯ ತ್ರಾಲ್ ಪ್ರದೇಶದಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಿಖರ ಮಾಹಿತಿ ಆಧರಿಸಿ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಶನಿವಾರ ಈ ಶವ ವಶಕ್ಕೆ ಪಡೆದಿದ್ದಾರೆ. ಅಡಗುದಾಣದಲ್ಲಿ ಸುಧಾರಿತ ಸ್ಫೋಟಕಗಳನ್ನು ಜೋಡಿಸುವ ಸಂದರ್ಭದಲ್ಲಿ ನಡೆದ ಸ್ಫೋಟದಲ್ಲಿ ಈ ಉಗ್ರ ಮೃತಪಟ್ಟಿದ್ದಾನೆ ಎಂದು ಪೊಲೀಸ್ ಮಹಾನಿರ್ದೇಶಕ ಎಸ್.ಪಿ.ವೈದ್ ತಿಳಿಸಿದ್ದಾರೆ.
ಮೃತ ಉಗ್ರನ ಗುರುತು ಪತ್ತೆಗೆ ಯತ್ನಿಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.