

ಶ್ರೀನಗರ: ಕಾಶ್ಮೀರ ಪ್ರತ್ಯೇಕತಾವಾದಿ ನಾಯಕ ಶಬೀರ್ ಶಾ ಆಪ್ತ ಅಸ್ಲಾಂ ವನಿ ಎಂಬಾತನನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಭಾನುವಾರ ಬಂಧಿಸಿದ್ದಾರೆ.
ಭಯೋತ್ಪಾದಕರಿಗೆ ಹಣಕಾಸು ನೆರವು ನೀಡುವ ಜಾಲದ ಬಗ್ಗೆ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ. ಈ ಜಾಲದಲ್ಲಿ ವನಿ ಪಾತ್ರವಿರುವ ಆರೋಪದ ಮೇಲೆ ಆತನನ್ನು ಬಂಧಿಸಲಾಗಿದೆ.
ಭಾನುವಾರ ಸಂಜೆ ವೇಳೆಗೆ ವನಿಯನ್ನು ದೆಹಲಿಗೆ ಕರೆತರುವ ಸಾಧ್ಯತೆ ಇದೆ.
ಭಯೋತ್ಪಾದಕರಿಗೆ ಹಣಕಾಸು ನೆರವು ನೀಡುವ ಜಾಲದಲ್ಲಿ ಸಕ್ರಿಯವಾಗಿರುವ ಆರೋಪದ ಮೇಲೆ ಜುಲೈ 25ರಂದು ಶಬೀರ್ ಶಾ ಅವರನ್ನು ಬಂಧಿಸಲಾಗಿತ್ತು. ಶಬೀರ್ ಅವರಿಗೆ ₹ 2.25 ಕೋಟಿ ಹಣ ನೀಡಿದ್ದಾಗಿ ವನಿ ಈ ಹಿಂದೆ ಬಂಧನಕ್ಕೊಳಗಾಗಿದ್ದ ವೇಳೆ ತಪ್ಪೊಪ್ಪಿಕೊಂಡಿದ್ದ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.