ADVERTISEMENT

ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಸಲ್ಮಾನ್ ಖಾನ್ ದೋಷಿ: ಜೋಧಪುರ ಕೋರ್ಟ್ ತೀರ್ಪು

ಏಜೆನ್ಸೀಸ್
Published 5 ಏಪ್ರಿಲ್ 2018, 8:43 IST
Last Updated 5 ಏಪ್ರಿಲ್ 2018, 8:43 IST
ಸಲ್ಮಾನ್ ಖಾನ್ (ಸಂಗ್ರಹ ಚಿತ್ರ)
ಸಲ್ಮಾನ್ ಖಾನ್ (ಸಂಗ್ರಹ ಚಿತ್ರ)   

ಜೋಧಪುರ: ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ದೋಷಿ ಎಂದು ಇಲ್ಲಿನ ನ್ಯಾಯಾಲಯ ತೀರ್ಪು ನೀಡಿದೆ.

ಪ್ರಕರಣದಲ್ಲಿ ಸಲ್ಮಾನ್ ಖಾನ್ ಹೊರತುಪಡಿಸಿ ಇತರ ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ. ನಟರಾದ ಸೈಫ್ ಅಲಿ ಖಾನ್, ಸೋನಾಲಿ ಬೇಂದ್ರೆ, ಟಬು ಮತ್ತು ನೀಲಂ ಅವರನ್ನು ಸಹ ಆರೋಪಿಗಳನ್ನಾಗಿ ಪರಿಗಣಿಸಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಮಾರ್ಚ್‌ 28ರಂದು ಮುಕ್ತಾಯಗೊಳಿಸಿದ್ದ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿತ್ತು.

ADVERTISEMENT

ಏನಿದು ಪ್ರಕರಣ?: 1998ರಲ್ಲಿ ಹಮ್ ಸಾಥ್ ಸಾಥ್ ಹೈ ಸಿನಿಮಾ ಶೂಟಿಂಗ್​ ವೇಳೆ ಜೋಧಪುರ ಸಮೀಪದ ಕಂಕಣಿ ಗ್ರಾಮದಲ್ಲಿ ಸಲ್ಮಾನ್ ಖಾನ್​ ಎರಡು ಕೃಷ್ಣಮೃಗಗಳನ್ನು ಬೇಟೆಯಾಡಿದ್ದರು. ಈ ಬೇಟೆಗೆ ಪರವಾನಗಿ ಇಲ್ಲದ ಬಂದೂಕು ಬಳಕೆ ಮಾಡಲಾಗಿತ್ತು ಎಂಬ ಆರೋಪವಿದೆ. ರಕ್ಷಿತಾರಣ್ಯ ಪ್ರದೇಶದಲ್ಲಿ ಕೃಷ್ಣಮೃಗ ಬೇಟೆಯಾಡಿದ್ದ ಸಲ್ಮಾನ್​ ಖಾನ್​ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಸೆಕ್ಷನ್ 9/51 ಮತ್ತು ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.