ADVERTISEMENT

ಕೃಷ್ಣ ನಿಲುವಿಗೆ ಕರುಣಾನಿಧಿ ಅಸಮಾಧಾನ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2012, 19:30 IST
Last Updated 22 ಮಾರ್ಚ್ 2012, 19:30 IST

ಚೆನ್ನೈ (ಐಎಎನ್‌ಎಸ್):  ಶ್ರೀಲಂಕಾದಲ್ಲಿ ಎಲ್‌ಟಿಟಿಇ ವಿರುದ್ಧ ನಡೆದ ಕದನದ ಸಂದರ್ಭದಲ್ಲಿ ತಮಿಳು ಜನಾಂಗದವರ ವಿರುದ್ಧ ನಡೆದ  ದೌರ್ಜನ್ಯ ಕುರಿತಂತೆ ವಿಶ್ವಸಂಸ್ಥೆಯಲ್ಲಿ ಮಂಡನೆ ಆಗಿರುವ ನಿರ್ಣಯಕ್ಕೆ ಸಂಬಂಧಿಸಿದಂತೆ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಅವರು ಸಮರ್ಪಕವಾಗಿ ಪ್ರತಿಕ್ರಿಯಿಸುತ್ತಿಲ್ಲ ಎಂದು ಡಿಎಂಕೆ ಮುಖ್ಯಸ್ಥ ಹಾಗೂ ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

`ಕೃಷ್ಣ ನನ್ನ ಮಿತ್ರ, ನಿಜ~. ಆದರೆ  `ಶ್ರೀಲಂಕಾದಲ್ಲಿನ ತಮಿಳರ ಪರಿಸ್ಥಿತಿ ಅರ್ಥ ಮಾಡಿಕೊಳ್ಳುವುದ ರಲ್ಲಿಯೇ ವಿಫಲವಾಗಿದ್ದಾರೆ~ ಟೀಕಿಸಿದರು.

ಶ್ರೀಲಂಕಾ ವಿದೇಶಾಂಗ ಸಚಿವ ಜಿ.ಎಲ್.ಪೆರಿಸ್ ಅವರೊಂದಿಗೆ ಕೃಷ್ಣ ನಡೆಸಿರುವ ಮಾತುಕತೆಯ ವಿವರವನ್ನು ಬಹಿರಂಗಗೊಳಿಸಿಲ್ಲ. ವಿಶ್ವಸಂಸ್ಥೆಯಲ್ಲಿ ಶ್ರೀಲಂಕಾ ವಿರುದ್ಧ ಮಂಡಿಸಲಾಗಿರುವ ನಿರ್ಣಯಕ್ಕೆ ಸಂಬಂಧಿಸಿದಂತೆ ಭಾರತ ಇದುವರೆಗೆ ಸೂಕ್ತ ನಿರ್ಧಾರ ಕೈಗೊಂಡಿಲ್ಲ  ಎಂದು ಟೀಕಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.