ADVERTISEMENT

ಕೆಲವೆಡೆ ಭೂಕಂಪನ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2012, 19:30 IST
Last Updated 10 ಫೆಬ್ರುವರಿ 2012, 19:30 IST

ಡೆಹ್ರಾಡೂನ್/ ಚಂಡೀಗಡ (ಪಿಟಿಐ): ಪಂಜಾಬ್, ಹರಿಯಾಣ, ಉತ್ತರಾಖಂಡ ರಾಜ್ಯ ಸೇರಿದಂತೆ ಉತ್ತರ ಭಾರತದಲ್ಲಿ ಶುಕ್ರವಾರ ನಸುಕಿನಲ್ಲಿ ಭೂಕಂಪದ ಅನುಭವ ಆಗಿದೆ.

ಮಧ್ಯರಾತ್ರಿ 12.47ರ ವೇಳೆಯಲ್ಲಿ ಸಂಭವಿಸಿದ ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 5ರಷ್ಟಿತ್ತು. ಉತ್ತರ ಕಾಶಿಯ ಬಾರ್‌ಕೋಟ್ ಜಿಲ್ಲೆಯಲ್ಲಿ ಕೆಲವು ಮನೆಗಳ ಗೋಡೆಗಳಲ್ಲಿ ಬಿರುಕು ಕಾಣಿಸಿಕೊಂಡಿದೆ. ಉತ್ತರಾಖಂಡದ ಯಮುನಾ ಕಣಿವೆಯಲ್ಲಿ ಭೂಕಂಪನ ತೀವ್ರತೆ ಜಾಸ್ತಿಯಾಗಿತ್ತು. ಜನರು ಗಾಬರಿಯಿಂದ ಮನೆಯಿಂದ ಹೊರಗೆ ಬಂದರು ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.