ADVERTISEMENT

ಕೇಂದ್ರದ ನಿಲುವಿಗೆ ‘ಸುಪ್ರೀಂ’ ಸೂಚನೆ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2017, 19:30 IST
Last Updated 7 ಅಕ್ಟೋಬರ್ 2017, 19:30 IST
ಕೇಂದ್ರದ ನಿಲುವಿಗೆ ‘ಸುಪ್ರೀಂ’ ಸೂಚನೆ
ಕೇಂದ್ರದ ನಿಲುವಿಗೆ ‘ಸುಪ್ರೀಂ’ ಸೂಚನೆ   

ನವದೆಹಲಿ: ರಾಜ್ಯದ ಗಣಿಗಳಿಂದ ಅದಿರು ಹೊರ ತೆಗೆಯುವುದರ ಮೇಲೆ ಮಿತಿ ಹೇರುವ ಕುರಿತು ಸ್ಪಷ್ಟ ನಿಲುವು ವ್ಯಕ್ತಪಡಿಸುವಂತೆ ಸುಪ್ರೀಂ ಕೋರ್ಟ್‌ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

ಗಣಿಗಾರಿಕೆಯ ಮಿತಿ ಹೆಚ್ಚಳವನ್ನು ವಿರೋಧಿಸಿ ಧಾರವಾಡದ ಸಮಾಜ ಪರಿವರ್ತನಾ ಸಮುದಾಯ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರಂಜನ್‌ ಗೋಗೊಯ್‌ ನೇತೃತ್ವದ ತ್ರಿಸದಸ್ಯ ಪೀಠ, ಸ್ಪಷ್ಟ ನಿಲುವಿನೊಂದಿಗೆ ಅ. 10ರೊಳಗೆ ಅರ್ಜಿ ಸಲ್ಲಿಸುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಿದೆ.

ಕೇಂದ್ರದ ಉಕ್ಕು ಸಚಿವಾಲಯವು ವಾರ್ಷಿಕ ಗಣಿಗಾರಿಕೆಯ ಮಿತಿಯನ್ನು 3 ಕೋಟಿ ಮೆಟ್ರಿಕ್‌ ಟನ್‌ನಿಂದ 5 ಕೋಟಿ ಮೆಟ್ರಿಕ್‌ ಟನ್‌ಗೆ ಹೆಚ್ಚಿಸುವ ಇಂಗಿತ ವ್ಯಕ್ತಪಡಿಸಿ ಅರ್ಜಿ ಸಲ್ಲಿಸಿದ್ದರೆ, ಅದಿರು ತೆಗೆಯುವ ಪ್ರಮಾಣದ ಮೇಲೆ ಮಿತಿ ಹೇರುವುದಕ್ಕೆ ಸಂಬಂಧಿಸಿದಂತೆ ತಜ್ಞರ ಸಮಿತಿಯೇ ಅಂತಿಮ ನಿರ್ಧಾರ ಕೈಗೊಳ್ಳಲಿ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವಾಲಯ ಅರ್ಜಿ ಸಲ್ಲಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.