ADVERTISEMENT

ಕೇಂದ್ರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಕಾಂಗ್ರೆಸ್ ನೋಟಿಸ್

ಏಜೆನ್ಸೀಸ್
Published 23 ಮಾರ್ಚ್ 2018, 12:33 IST
Last Updated 23 ಮಾರ್ಚ್ 2018, 12:33 IST
ಮಲ್ಲಿಕಾರ್ಜುನ ಖರ್ಗೆ (ಸಂಗ್ರಹ ಚಿತ್ರ)
ಮಲ್ಲಿಕಾರ್ಜುನ ಖರ್ಗೆ (ಸಂಗ್ರಹ ಚಿತ್ರ)   

ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಲು ಅವಕಾಶ ನೀಡುವಂತೆ ಪ್ರತಿಪಕ್ಷ ಕಾಂಗ್ರೆಸ್ ಸಹ ನೋಟಿಸ್ ನೀಡಿದೆ.

ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಲೋಕಸಭೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದು, ಅವಿಶ್ವಾಸ ಗೊತ್ತುವಳಿಯ ಪರಿಷ್ಕೃತ ಪಟ್ಟಿಯಲ್ಲಿ ಕಾಂಗ್ರೆಸ್‌ ನೋಟಿಸ್‌ ಅನ್ನೂ ಸೇರಿಸುವಂತೆ ಮನವಿ ಮಾಡಿದ್ದಾರೆ.

ತೆಲುಗುದೇಶಂ ಪಕ್ಷ (ಟಿಡಿಪಿ) ಮತ್ತು ವೈಎಸ್‌ಆರ್ ಕಾಂಗ್ರೆಸ್‌ ಈಗಾಗಲೇ ಅವಿಶ್ವಾಸ ಗೊತ್ತುವಳಿ ಮಂಡಿಸಲು ನೋಟಿಸ್‌ ನೀಡಿವೆ. ಪ್ರತಿಪಕ್ಷಗಳ ಸದಸ್ಯರ ಗದ್ದಲದಿಂದಾಗಿ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಅವಕಾಶ ಲಭಿಸಿರಲಿಲ್ಲ. ಹೀಗಾಗಿ ಎರಡೂ ಪಕ್ಷಗಳು ಗುರುವಾರ ಮತ್ತೆ ತಕ್ಷಣವೇ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಅವಕಾಶ ನೀಡಬೇಕು ಎಂದು ನೋಟಿಸ್ ನೀಡಿವೆ. ಆದರೆ, ಶುಕ್ರವಾರ ಕಲಾಪವನ್ನು ಮುಂದೂಡಲಾಗಿರುವುದರಿಂದ ಮಂಡನೆಗೆ ಅವಕಾಶ ದೊರೆತಿಲ್ಲ.

ADVERTISEMENT

(ಮಲ್ಲಿಕಾರ್ಜುನ ಖರ್ಗೆ ಅವರು ಲೋಕಸಭೆಯ ಪ್ರಧಾನ ಕಾರ್ಯದರ್ಶಿಗೆ ಬರೆದಿರುವ ಪತ್ರದ ಪ್ರತಿ)

ಇನ್ನಷ್ಟು ಸುದ್ದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.