ADVERTISEMENT

ಕೇಂದ್ರ ನೌಕರರ ತುಟ್ಟಿಭತ್ಯೆ ಶೇ 10ರಷ್ಟು ಹೆಚ್ಚಳ?

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2013, 19:59 IST
Last Updated 4 ಆಗಸ್ಟ್ 2013, 19:59 IST

ನವದೆಹಲಿ (ಪಿಟಿಐ): ಕೇಂದ್ರ ಸರ್ಕಾರ ತನ್ನ ನೌಕರರಿಗೆ ಜುಲೈ 1ರಿಂದ ಅನ್ವಯವಾಗುವಂತೆ ತುಟ್ಟಿಭತ್ಯೆಯನ್ನು ಶೇ 10ರಷ್ಟು  ಹೆಚ್ಚಿಸುವ ಸಾಧ್ಯತೆ ಇದೆ.

ಸೆಪ್ಟೆಂಬರ್‌ನಲ್ಲಿ ಈ ಪ್ರಕಟಣೆ ಹೊರಬೀಳಲಿದ್ದು ನೌಕರರಿಗೆ ಸದ್ಯ ನೀಡಲಾಗುವ ತುಟ್ಟಿಭತ್ಯೆ ಶೇ 80ರಿಂದ 90ಕ್ಕೆ ಏರಲಿದೆ.
50 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 30 ಲಕ್ಷ ನಿವೃತ್ತ ನೌಕರರು ಇದರ ಪ್ರಯೋಜನ ಪಡೆಯಲಿದ್ದಾರೆ.

`ಸರ್ಕಾರ ಶೇ 90ರಷ್ಟು ತುಟ್ಟಿಭತ್ಯೆ ಹೆಚ್ಚಿಸುವ ಜೊತೆಗೆ ಶೇ 50ರಷ್ಟು ಭತ್ಯೆಯನ್ನು ಮೂಲವೇತನಕ್ಕೆ ಸೇರಿಸಬೇಕು ಎಂಬ ಬೇಡಿಕೆಯನ್ನು ಈಡೇರಿಸಬೇಕು' ಎಂದು ಕೇಂದ್ರ ಸರ್ಕಾರಿ ನೌಕರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕೆ.ಕೆ. ಕುಟ್ಟಿ ಒತ್ತಾಯಿಸಿದ್ದಾರೆ.

ಮೂಲ ವೇತನಕ್ಕೆ ತುಟ್ಟಿಭತ್ಯೆ ಸೇರಿಸದಿದ್ದರೆ ಈ ಕೊಡುಗೆಯಿಂದ ನೌಕರರಿಗೆ ಯಾವುದೇ ಹೆಚ್ಚಿನ ಪ್ರಯೋಜನವಾಗಲಾರದು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜ. 1, 2013ರಿಂದ ಅನ್ವಯವಾಗುವಂತೆ ಕಳೆದ ಏ.ನಲ್ಲಿ ಶೇ 72ರಷ್ಟಿದ್ದ ತುಟ್ಟಿಭತ್ಯೆಯನ್ನು ಶೇ 80ಕ್ಕೆ ಹೆಚ್ಚಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.