ನವದೆಹಲಿ (ಐಎಎನ್ಎಸ್): ~ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು ರೂ.1,500 ರಿಂದ ರೂ.3,000ಕ್ಕೆ ಮತ್ತು ಸಹಾಯಕಿಯರ ಗೌರವಧನವನ್ನು ರೂ.750 ರಿಂದ ರೂ.1,500 ಕ್ಕೆ ಹೆಚ್ಚಿಸಲಾಗಿದೆ.~
~ಬಹುದಿನದ ಬೇಡಿಕೆಯಾಗಿದ್ದ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಗೌರವಧನವನ್ನು ಹೆಚ್ಚಿಸಲಾಗಿದೆ~ ಎಂದು ಹಣಕಾಸು ಸಚಿವ ಪ್ರಣವ್ ಮುಖರ್ಜಿ ಅವರು, ತಾವು ಸೋಮವಾರ ಮಂಡಿಸಿದ ಬಜೆಟ್ ನಲ್ಲಿ ಈ ಘೋಷಣೆ ಮಾಡಿದ್ದಾರೆ.
‘ಪ್ರಸಕ್ತ ಸಾಲಿನ ಏಪ್ರೀಲ್ 1 ರಿಂದ ಈ ಗೌರವಧನ ಆದೇಶ ಜಾರಿಗೆ ಬರಲಿದೆ. ಇದರಿಂದ ದೇಶದಲ್ಲಿರುವ ಸುಮಾರು 22 ಲಕ್ಷ ಅಂಗನವಾಡಿ ಕಾರ್ಯಕರ್ತರಿಗೆ ಸಹಾಯವಾಗಲಿದೆ’ ಎಂದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.