ADVERTISEMENT

ಕೇಂದ್ರ ಸಂಪುಟ ಪುನರ್‌ರಚನೆ?

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2012, 19:30 IST
Last Updated 16 ಅಕ್ಟೋಬರ್ 2012, 19:30 IST

ನವದೆಹಲಿ (ಪಿಟಿಐ): ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರು ಮಂಗಳವಾರ  ರಾಷ್ಟ್ರಪತಿ ಪ್ರಣವ್ ಮುಖರ್ಜಿ ಮತ್ತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಗಂಟೆಗೂ ಹೆಚ್ಚು ಕಾಲ ಸಮಾಲೋಚನೆ ನಡೆಸಿದ್ದು, ಸರ್ಕಾರದಲ್ಲಿ ಸಚಿವ ಸಂಪುಟ ಪುನರ್‌ರಚನೆಯ ವದಂತಿಗಳು ಗರಿಗೆದರಿವೆ.

ನಾಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಅವರು ಕೂಡ ರಾಷ್ಟ್ರಪತಿಯನ್ನು ಭೇಟಿಯಾಗುವ ಸಾಧ್ಯತೆ ಇದೆ. ಸಂಪುಟದಲ್ಲಿ ಹೊಸ ಮುಖಗಳು ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ರಾಹುಲ್‌ಗೆ ಆಪ್ತರಾಗಿರುವ ಮಣಿಕಾ ಟ್ಯಾಗೋರ್ ಮತ್ತು ಮೀನಾಕ್ಷಿ ನಟರಾಜನ್  ಸಂಪುಟದಲ್ಲಿ ಸ್ಥಾನ ಪಡೆಯುವ ಸೂಚನೆಗಳಿವೆ. ರಾಜ್ಯ ಖಾತೆಯ ಸಚಿವ ಸ್ಥಾನಮಾನ ಹೊಂದಿರುವ ಸಚಿನ್ ಪೈಲಟ್, ಜ್ಯೋತಿರಾದಿತ್ಯ ಸಿಂಧಿಯಾ ಹಾಗೂ ಜಿತಿನ್ ಪ್ರಸಾದ ಅವರಿಗೆ, ಸಂಪುಟ ದರ್ಜೆ ಅಥವಾ ಸ್ವತಂತ್ರ ಖಾತೆಗೆ ಬಡ್ತಿ ನೀಡುವ ನಿರೀಕ್ಷೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.