ADVERTISEMENT

ಕೇಂದ್ರ ಸಚಿವ ಬಂಡಾರು ವಿರುದ್ಧ ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 18 ಜನವರಿ 2016, 12:43 IST
Last Updated 18 ಜನವರಿ 2016, 12:43 IST
ಕೇಂದ್ರ  ಸಚಿವ ಬಂಡಾರು ವಿರುದ್ಧ ಪ್ರಕರಣ ದಾಖಲು
ಕೇಂದ್ರ ಸಚಿವ ಬಂಡಾರು ವಿರುದ್ಧ ಪ್ರಕರಣ ದಾಖಲು   

ಹೈದರಾಬಾದ್‌ (ಪಿಟಿಐ): ದಲಿತ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಬಂಡಾರು ದತ್ತಾತ್ರೇಯ ವಿರುದ್ಧ ಹೈದರಾಬಾದ್‌ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹೈದರಾಬಾದ್‌ ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ವಿದ್ಯಾರ್ಥಿಯಾಗಿದ್ದ ರೋಹಿತ್‌ ಎಂಬುವರು ಆತ್ಮಹತ್ಯೆ ಮಾಡಿಕೊಂಡಿದ್ದರು.  ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯದ ಕುಲಪತಿ ವಿರುದ್ಧವು ಪ್ರಕರಣ ದಾಖಲಾಗಿದೆ.

ವಿಶ್ವವಿದ್ಯಾಲಯದ ಆವರಣದಲ್ಲಿ  ವಿದ್ಯಾರ್ಥಿಗಳ ಗಲಾಟೆಗೆ ಸಂಬಂಧಿಸಿದಂತೆ  ರೋಹಿತ್‌ ಅವರನ್ನು ಹಾಸ್ಟೆಲ್‌ನಿಂದ ಹೊರ ಹಾಕಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.