ADVERTISEMENT

ಕೇಜ್ರಿವಾಲ್‌ಗೆ ಹಕ್ಕುಚ್ಯುತಿ ನೋಟಿಸ್

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2012, 19:30 IST
Last Updated 17 ಮಾರ್ಚ್ 2012, 19:30 IST

ನವದೆಹಲಿ (ಪಿಟಿಐ): ಅಣ್ಣಾ ಹಜಾರೆ ತಂಡದ ಪ್ರಮುಖ ಸದಸ್ಯ ಅರವಿಂದ ಕೇಜ್ರಿವಾಲ್ ಅವರಿಗೆ ಕಾಂಗ್ರೆಸ್ ಸಂಸದ ಸಜ್ಜನ್ ಸಿಂಗ್ ವರ್ಮಾ ಹಕ್ಕುಚ್ಯುತಿ ನೋಟಿಸ್ ನೀಡಿದ್ದಾರೆ.ಕೇಜ್ರಿವಾಲ್ ಅವರಿಗೆ ಹಕ್ಕುಚ್ಯುತಿ ನೋಟಿಸ್ ನೀಡಿರುವ ಎರಡನೇ ಪ್ರಕರಣ ಇದಾಗಿದೆ.

ಉತ್ತರ ಪ್ರದೇಶ ಈಚೆಗೆ ನಡೆದ ಚುನಾವಣಾ ಪ್ರಚಾರದ ವೇಳೆ, ಗಾಜಿಯಾಬಾದ್‌ನಲ್ಲಿ ನಡೆದ  ಜನಜಾಗೃತಿ ರ‌್ಯಾಲಿಯೊಂದರಲ್ಲಿ ಸಂಸದರನ್ನು ಕುರಿತು ಅತ್ಯಾಚಾರಿಗಳು, ಕೊಲೆಗಡುಕರು ಮತ್ತು ಲೂಟಿಕೋರರು ಎಂಬ ಟೀಕೆಯನ್ನು ಕ್ರೇಜಿವಾಲ್ ಮಾಡಿದ್ದಾರೆ. ಇದರಿಂದ ಸಂಸದರ ಗೌರವ- ಘನತೆಗೆ ಧಕ್ಕೆ ಉಂಟಾಗಿದೆ ಎಂದು ಮಧ್ಯಪ್ರದೇಶದ ದಿವಾಸ್ ಕ್ಷೇತ್ರದ ಸಂಸದ ಸಜ್ಜನ್ ಸಿಂಗ್ ವರ್ಮಾ ಈ ನೋಟಿಸ್ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.