ADVERTISEMENT

ಕೇಜ್ರಿವಾಲ್ ವಿರುದ್ಧ ಹಕ್ಕುಚ್ಯುತಿ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2012, 19:30 IST
Last Updated 26 ಫೆಬ್ರುವರಿ 2012, 19:30 IST

ನವದೆಹಲಿ (ಪಿಟಿಐ): `ಸಂಸದರು ಅತ್ಯಾಚಾರಿಗಳು, ಕೊಲೆಗಡುಕರು ಮತ್ತು ಲೂಟಿಕೋರರು~ ಎಂದು ಅವಹೇಳನ ಮಾಡಿರುವ ಅಣ್ಣಾ ತಂಡದ ಅರವಿಂದ ಕೇಜ್ರಿವಾಲ್ ವಿರುದ್ಧ ಸಂಸತ್ತಿನಲ್ಲಿ ಹಕ್ಕುಚ್ಯುತಿ ಮಂಡಿಸಲು ಆರ್‌ಜೆಡಿ ನಿರ್ಧರಿಸಿದೆ.

ಕೇಜ್ರಿವಾಲ್ ಅವರ ಈ ಹೇಳಿಕೆ ಅತಿರೇಕತನದ್ದಾಗಿದ್ದು, ಸಂಸತ್‌ಗೆ ಅವಮಾನ ಮಾಡಿದಂತಾಗಿದೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನದಲ್ಲಿ ನಂಬಿಕೆ ಇಲ್ಲ ಎನ್ನುವುದಕ್ಕೆ ಈ ಹೇಳಿಕೆ ಸಾಕ್ಷಿಯಾಗಿದೆ ಎಂದು ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ರಾಮ್ ಕೃಪಾಲ್ ಯಾದವ್ ಹೇಳಿದ್ದಾರೆ.

ಮುಂದಿನ ತಿಂಗಳ ನಡೆಯುವ ಬಜೆಟ್ ಅಧಿವೇಶನದಲ್ಲಿ ಹಕ್ಕುಚ್ಯುತಿ ಮಂಡಿಸಲಾಗುವುದು ಎಂದಿದ್ದಾರೆ.  ಕಾಂಗ್ರೆಸ್, ಬಿಜೆಪಿ ಸಹ ಕೇಜ್ರಿವಾಲ್ ಹೇಳಿಕೆಯನ್ನು ಖಂಡಿಸಿವೆ. ಉತ್ತರ ಪ್ರದೇಶದ ಚುನಾವಣಾ ರ‌್ಯಾಲಿಯಲ್ಲಿ ಶನಿವಾರ ಕೇಜ್ರಿವಾಲ್ ಸಂಸದರ ಬಗ್ಗೆ ಈ ಹೇಳಿಕೆ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.