ADVERTISEMENT

`ಕೇದಾರನಾಥ ವಿಪತ್ತಿಗೆ ಮನುಷ್ಯ ಚಟುವಟಿಕೆ ಕಾರಣ'

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2013, 19:59 IST
Last Updated 4 ಆಗಸ್ಟ್ 2013, 19:59 IST

ನವದೆಹಲಿ (ಪಿಟಿಐ): ಜೈವಿಕವಾಗಿ ಸೂಕ್ಷ್ಮಪ್ರದೇಶವೆಂದು ಪರಿಗಣಿತವಾಗಿರುವ ಕೇದಾರನಾಥದಲ್ಲಿ ಇತ್ತೀಚೆಗೆ ಸಂಭವಿಸಿದ ನೈಸರ್ಗಿಕ ವಿಕೋಪಕ್ಕೆ ಮನುಷ್ಯನ ಚಟುವಟಿಕೆಗಳೇ ಕಾರಣ ಎಂದು ಅಧ್ಯಯನವೊಂದು ತಿಳಿಸಿದೆ.

ಪ್ರತಿಷ್ಠಿತ ವಾಡಿಯಾ ಇನ್‌ಸ್ಟಿಟ್ಯೂಟ್ ಆಫ್ ಜಿಯೊಲಾಜಿ ಸಂಸ್ಥೆಯ ವಿಜ್ಞಾನಿಗಳ ತಂಡ ನಡೆಸಿದ ಅಧ್ಯಯನದಲ್ಲಿ ಈ ಅಂಶ ಒತ್ತಿ ಹೇಳಲಾಗಿದೆ.

ಪ್ರಾಕೃತಿಕ ತಾಣವಾಗಿರುವ ಕೇದಾರನಾಥದಲ್ಲಿ ಪ್ರವಾಸೋದ್ಯಮ ಮತ್ತು ಮನುಷ್ಯನ ಅತಿಯಾದ ಚಟುವಟಿಕೆಗಳೇ ಪ್ರವಾಹದಂತಹ ನೈಸರ್ಗಿಕ ವಿಕೋಪ ಸಂಭವಿಸಲು ಕಾರಣ.

ಮನುಷ್ಯ ಇದೇ ರೀತಿ ಚಟುವಟಿಕೆಗಳನ್ನು ಮುಂದುವರಿಸಿದಲ್ಲಿ ಭವಿಷ್ಯದಲ್ಲೂ ಇಂಥ ನೈಸರ್ಗಿಕ ವಿಕೋಪಗಳು ಸಂಭವಿಸಲಿವೆ ಎಂದು ಅಧ್ಯಯನ ಎಚ್ಚರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.