ತಿರುವನಂತಪುರ (ಐಎಎನ್‌ಎಸ್): ನೈರುತ್ಯ ಮುಂಗಾರು ಕೇರಳವನ್ನು ಶನಿವಾರ ಪ್ರವೇಶಿಸಿದ್ದು, ಕಳೆದ 24 ಗಂಟೆಗಳಿಂದ ರಾಜ್ಯದ್ಲ್ಲೆಲೆಡೆ ವ್ಯಾಪಕ ಮಳೆಯಾಗುತ್ತಿದೆ.ಕರ್ನಾಟಕದ ಕೆಲವು ಭಾಗಗಳಲ್ಲಿ, ತಮಿಳುನಾಡಿನ ಬಹುತೇಕ ಕಡೆಗಳಲ್ಲಿ ಮಳೆಯಾಗುತ್ತಿದೆ ಇನ್ನು 48 ಗಂಟೆಗಳಲ್ಲಿ ಅರಬ್ಬಿ ಸಮುದ್ರದ ಮಧ್ಯಭಾಗ, ಕರ್ನಾಟಕದ ಉಳಿದ ಭಾಗ, ತಮಿಳುನಾಡು, ಆಂಧ್ರಪ್ರದೇಶ ಮತ್ತು ಬಂಗಾಳಕೊಲ್ಲಿಯ ಬಹುತೇಕ ಭಾಗಗಳಿಗೆ ಮುಂಗಾರು ಮಳೆ ವಿಸ್ತರಿಸಲಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಎಲ್.ಎಸ್. ರಾಥೋಡ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.