ADVERTISEMENT

ಕೊಲಿಜಿಯಂ ಶಿಫಾರಸು ಬಹಿರಂಗಕ್ಕೆ ನಿರ್ಧಾರ

ಪಿಟಿಐ
Published 6 ಅಕ್ಟೋಬರ್ 2017, 19:30 IST
Last Updated 6 ಅಕ್ಟೋಬರ್ 2017, 19:30 IST

ನವದೆಹಲಿ: ನ್ಯಾಯಾಧೀಶರು ಮತ್ತು ನ್ಯಾಯಮೂರ್ತಿಗಳ ಬಡ್ತಿ, ವರ್ಗಾವಣೆ ಸಂಬಂಧ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವ ಎಲ್ಲ ಶಿಫಾರಸುಗಳನ್ನು ಸುಪ್ರೀಂ ಕೋರ್ಟ್‌ನ ಜಾಲತಾಣದಲ್ಲಿ ಪ್ರಕಟಿಸಲು ಕೊಲಿಜಿಯಂ ನಿರ್ಧರಿಸಿದೆ.

‘ಕೊಲಿಜಿಯಂ ಪದ್ಧತಿಯಲ್ಲಿ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ತರಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ’ ಎಂದು ಆದೇಶ ಪ್ರತಿಯಲ್ಲಿ ವಿವರಿಸಲಾಗಿದೆ.

‘ಹೈಕೋರ್ಟ್‌ ನ್ಯಾಯಮೂರ್ತಿಗಳನ್ನು ಮುಖ್ಯ ನ್ಯಾಯಮೂರ್ತಿಗಳಾಗಿ, ಹೈಕೋರ್ಟ್‌ ನ್ಯಾಯಮೂರ್ತಿಗಳನ್ನು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾಗಿ ಮತ್ತು ಅಧೀನ ನ್ಯಾಯಾಲಯಗಳ ನ್ಯಾಯಾಧೀಶರನ್ನು ಹೈಕೋರ್ಟ್‌ ಪೀಠಕ್ಕೆ ನೇಮಿಸಿ ಬಡ್ತಿ ನೀಡುವ ಸಂಬಂಧ ಕೊಲಿಜಿಯಂ ಸರ್ಕಾರಕ್ಕೆ ಮಾಡುವ ಶಿಫಾರಸುಗಳನ್ನು ಜಾಲತಾಣದಲ್ಲಿ ಪ್ರಕಟಿಸಲಾಗುತ್ತದೆ’ ಎಂದು ವಿವರಿಸಲಾಗಿದೆ.

ADVERTISEMENT

ಕೊಲಿಜಿಯಂನ ಈ ನಿರ್ಧಾರ ಈಗಾಗಲೇ ಜಾರಿಯಾಗಿದೆ. ಮದ್ರಾಸ್ ಹೈಕೋರ್ಟ್‌ ಮತ್ತು ಕಲ್ಕತ್ತಾ ಹೈಕೋರ್ಟ್‌
ಗಳಿಗೆ ಇತ್ತೀಚೆ ಮಾಡಲಾದ ನೇಮಕಾತಿ ಶಿಫಾರಸುಗಳನ್ನು ಸುಪ್ರೀಂ ಕೋರ್ಟ್‌ನ ಜಾಲತಾಣದಲ್ಲಿ ಪ್ರಕಟಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.