ADVERTISEMENT

ಕೊಹ್ಲಿ ಸಿಬಿಐ ಬಲೆಗೆ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2011, 19:30 IST
Last Updated 23 ಸೆಪ್ಟೆಂಬರ್ 2011, 19:30 IST

ನವದೆಹಲಿ (ಪಿಟಿಐ): ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಶುಕ್ರವಾರ ಭಾರತ ದಂತ ವೈದ್ಯಕೀಯ ಮಂಡಳಿಯ (ಡಿಸಿಐ) ಮಾಜಿ ಅಧ್ಯಕ್ಷ ಅನಿಲ್ ಕೊಹ್ಲಿ ಅವರ ಸ್ಥಿರಾಸ್ತಿಯ ಶೋಧ ಕಾರ್ಯ ನಡೆಸಿತು.

ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಗುರುವಾರ ಇವರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಸಿಬಿಐ ವಕ್ತಾರರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ, 6 ಕಡೆ ಶೋಧ ಕಾರ್ಯ ನಡೆಸಲಾಗಿದೆ.

2006ರಿಂದ 2010ರವರೆಗೆ ಡಿಸಿಐ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಕೆಲವು ದಂತ ವೈದ್ಯಕೀಯ ಸಂಸ್ಥೆಗಳಿಂದ ಲಂಚ ತೆಗೆದುಕೊಂಡ ಆರೋಪವನ್ನು ಕೊಹ್ಲಿ ಎದುರಿಸುತ್ತಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.