ADVERTISEMENT

ಕೋಮು ಗಲಭೆ: ಇಬ್ಬರ ಸಾವು

ಪಿಟಿಐ
Published 12 ಮೇ 2018, 19:30 IST
Last Updated 12 ಮೇ 2018, 19:30 IST

ಔರಂಗಾಬಾದ್: ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ಎರಡು ಸಮುದಾಯಗಳ ನಡುವೆ ಶುಕ್ರವಾರ ರಾತ್ರಿ ನಡೆದ ಘರ್ಷಣೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. 12 ಮಂದಿ ಪೊಲೀಸರು ಸೇರಿದಂತೆ ಐವತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪರಿಸ್ಥಿತಿ ಈಗ ಹತೋಟಿಯಲ್ಲಿದೆ. ಆದರೂ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿದೆ. ಪೊಲೀಸರ ಗುಂಡೇಟಿಗೆ
17 ವರ್ಷದ ಯುವಕ ಸತ್ತಿದ್ದಾನೆ. ಗಲಭೆಕೋರರು ಮನೆಯೊಂದಕ್ಕೆ ಹಚ್ಚಿದ ಬೆಂಕಿಯಲ್ಲಿ ಸಿಲುಕಿ 65 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.

ಶುಕ್ರವಾರ ರಾತ್ರಿ 10 ಗಂಟೆಗೆ ಮೋತಿ ಕಾರಾಂಜಾ ಪ್ರದೇಶದಲ್ಲಿ ಗಲಭೆ ಆರಂಭವಾಗಿತ್ತು. ಅದು ಗಾಂಧಿ ನಗರ, ರಾಜಬಜಾರ್‌, ಶಾಗಂಜ್‌ ಹಾಗೂ ಸರ್ಪಾ ಪ್ರದೇಶಕ್ಕೆ ವ್ಯಾಪಿಸಿತು. ಸ್ಥಳಕ್ಕೆ ಬಂದ ಪೊಲೀಸರು ಗಾಳಿಯಲ್ಲಿ ಗುಂಡು ಹಾಗೂ ಅಶ್ರುವಾಯು ಪ್ರಯೋಗಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಯತ್ನಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.