ADVERTISEMENT

ಕ್ರಿಕೆಟ್ ಸಂಬಂಧ ಪುನರಾರಂಭಕ್ಕೆ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2012, 19:30 IST
Last Updated 8 ಏಪ್ರಿಲ್ 2012, 19:30 IST

ನವದೆಹಲಿ: ಎರಡೂ ರಾಷ್ಟ್ರಗಳ ಮಧ್ಯೆಯ ಕ್ರಿಕೆಟ್ ಸಂಬಂಧವನ್ನು ಪುನರಾರಂಭಿಸಬೇಕು ಎಂದು ಪಾಕಿಸ್ತಾನದ ಅಧ್ಯಕ್ಷ ಅಸಿಫ್ ಅಲಿ ಜರ್ದಾರಿ ಅವರು ಔತಣ ಕೂಟದ ಸಂದರ್ಭದ ಸಭೆಯಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಕೋರಿದರು ಎನ್ನಲಾಗಿದೆ.

ಆದರೆ ಪ್ರಧಾನಿ ಅವರು ಈ ಕೋರಿಕೆಗೆ ಏನು ಪ್ರತಿಕ್ರಿಯೆ ನೀಡಿದರು ಎಂಬುದು ತಿಳಿದು ಬಂದಿಲ್ಲ.
2008ರಲ್ಲಿ ಮುಂಬೈ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ ನಂತರ ಪಾಕಿಸ್ತಾನದ ಜತೆ ಕ್ರಿಕೆಟ್ ಸೇರಿದಂತೆ ಎಲ್ಲಾ ಕ್ರೀಡಾ ಸಂಬಂಧಗಳನ್ನು ಭಾರತ ಕಳೆದುಕೊಂಡಿದೆ.

2011ರಲ್ಲಿ ಭಾರತ ಮತ್ತು ಪಾಕಿಸ್ತಾನದ ಮಧ್ಯೆ ವಿಶ್ವಕಪ್ ಸೆಮಿಫೈನಲ್ ಪಂದ್ಯ ಮೊಹಾಲಿಯಲ್ಲಿ ನಡೆದಾಗ ಪಾಕಿಸ್ತಾನ ಪ್ರಧಾನಿ ಯುಸೂಫ್ ರಜಾ ಗಿಲಾನಿ ಮತ್ತು ಮನಮೋಹನ್ ಸಿಂಗ್ ಒಟ್ಟಿಗೆ ಕುಳಿತು ಪ.ದ್ಯವನ್ನು ವೀಕ್ಷಿಸಿದ್ದರು.


ಭದ್ರತೆಯ ಕಾರಣಕ್ಕಾಗಿ ಇತ್ತೀಚೆಗೆ ಲಾಹೋರ್‌ನಲ್ಲಿ ನಡೆದ ಮೂರು ರಾಷ್ಟ್ರಗಳ ಹಾಕಿ ಪಂದ್ಯದಲ್ಲಿ ಭಾಗವಹಿಸಲು ಭಾರತ ನಿರಾಕರಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT