ADVERTISEMENT

ಕ್ಷೀಣಿಸಿದ ಬಾಬಾ ಆರೋಗ್ಯ,ಪುಟ್ಟಪರ್ತಿಯಲ್ಲಿ ನಿಷೇಧಾಜ್ಞೆ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2011, 18:30 IST
Last Updated 21 ಏಪ್ರಿಲ್ 2011, 18:30 IST

ಪುಟ್ಟಪರ್ತಿ (ಪಿಟಿಐ):ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶ್ರೀ ಸತ್ಯ ಸಾಯಿ ಬಾಬಾ ಅವರ ಆರೋಗ್ಯ ಕ್ಷೀಣಿಸಿರುವ ವದಂತಿ ಹರಡುತ್ತಿದ್ದಂತೆಯೇ ಸಾವಿರಾರು ಭಕ್ತರು ಪುಟ್ಟಪರ್ತಿಯತ್ತ ಧಾವಿಸುತ್ತಿದ್ದು, ಇಡೀ ಪಟ್ಟಣದಲ್ಲಿ ನಿಷೇಧಾಜ್ಞೆ ಹೇರಲಾಗಿದೆ.

ಕಡಿಮೆ ರಕ್ತದೊತ್ತಡ ಮತ್ತು ಯಕೃತ್ತು ಸರಿಯಾಗಿ ಕಾರ್ಯನಿರ್ವಹಿಸದೇ ಇರುವುದರಿಂದ ಬಾಬಾ ಅವರ ಆರೋಗ್ಯ ಕ್ಷೀಣಿಸಿದೆ.

ಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಸುಮಾರು ಎರಡು ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಬಾಬಾ ಅವರು ಚಿಕಿತ್ಸೆ ಪಡೆಯುತ್ತಿರುವ ಸತ್ಯ ಸಾಯಿ ಉನ್ನತ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸುತ್ತಲೂ ಬಿಗಿ ಭದ್ರತೆ ಏರ್ಪಡಿಸಲಾಗಿದೆ.

ರಾಜ್ಯದ ಪೊಲೀಸ್ ಮಹಾ ನಿರ್ದೇಶಕ ಅರವಿಂದ ರಾವ್ ಅವರು ಹೈದರಾಬಾದ್‌ನಲ್ಲಿ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಅವ ರನ್ನು ಭೇಟಿ ಮಾಡಿ ಪುಟ್ಟಪರ್ತಿಯಲ್ಲಿ ಏರ್ಪಡಿಸಲಾಗಿರುವ ಭದ್ರತೆ ಬಗ್ಗೆ ಮಾಹಿತಿ ನೀಡಿದರು.

ಬೃಹತ್ ಕೈಗಾರಿಕೆ ಗಳ ಸಚಿವೆ ಜೆ.ಗೀತಾ ರೆಡ್ಡಿ, ಅನಂತಪುರ ಜಿಲ್ಲಾಧಿಕಾರಿ ಬಿ.ಜನಾರ್ಧನ ರೆಡ್ಡಿ ಮತ್ತು ರಾಜ್ಯ ಪೊಲೀಸ್ ಮಹಾ ನಿರೀಕ್ಷಕ ಚಾರು ಸಿನ್ಹ ಅವರು ಪುಟ್ಟಪರ್ತಿಯಲ್ಲಿಯೇ ಮೊಕ್ಕಾಂ ಹೂಡಿದ್ದು, ಬಾಬಾ ಆರೋಗ್ಯದ ಸ್ಥಿತಿಗತಿಗಳ ಬಗ್ಗೆ ಗಮನ ಹರಿಸಿದ್ದಾರೆ. ಜತೆಗೆ ಕಾನೂನು ಸುವ್ಯವಸ್ಥೆಯ ಬಗ್ಗೆಯೂ ಪರಿಶೀಲನೆ ನಡೆಸಿದರು.

ಸತ್ಯ ಸಾಯಿ ಉನ್ನತ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸುತ್ತಲೂ ನಿಷೇಧಾಜ್ಞೆ ವಿಧಿಸಿರುವುದರಿಂದ ಈ ಪ್ರದೇಶದಲ್ಲಿನ ಅಂಗಡಿ ಮುಂಗಟ್ಟುಗಳು ಮುಚ್ಚಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಅನಂತಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಹನಾವಾಜ್ ಖಾಸಿಂ ಅವರು ಸ್ಥಳದಲ್ಲಿಯೇ ಇದ್ದು, ಭದ್ರತೆಯ ಮೇಲ್ವಿಚಾರಣೆ ನೋಡಿಕೊಳ್ಳುತ್ತಿದ್ದಾರೆ.

ಬಾಬಾ ಅವರ ಆರೋಗ್ಯ ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ ಸತ್ಯ ಸಾಯಿ ಕೇಂದ್ರ ಟ್ರಸ್ಟ್‌ನ ಸದಸ್ಯರು ಸಭೆ ನಡೆಸಿ, ಟ್ರಸ್ಟ್‌ನ ವ್ಯವಹಾರದ ಬಗ್ಗೆ ಚರ್ಚಿಸಿದರು.

ಸಭೆಯಲ್ಲಿ ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ (ಹಣಕಾಸು) ಎಲ್.ವಿ.ಸುಬ್ರಹ್ಮಣ್ಯ ಅವರೂ ಪಾಲ್ಗೊಂಡಿದ್ದರು.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶ್ರೀ ಸತ್ಯ ಸಾಯಿ ಬಾಬಾ ಅವರ ಆರೋಗ್ಯ ಕ್ಷೀಣಿಸಿರುವ ವದಂತಿ ಹರಡುತ್ತಿದ್ದಂತೆಯೇ ಸಾವಿರಾರು ಭಕ್ತರು ಪುಟ್ಟಪರ್ತಿಯತ್ತ ಧಾವಿಸುತ್ತಿದ್ದು, ಇಡೀ ಪಟ್ಟಣದಲ್ಲಿ ನಿಷೇಧಾಜ್ಞೆ ಹೇರಲಾಗಿದೆ.

ಕಡಿಮೆ ರಕ್ತದೊತ್ತಡ ಮತ್ತು ಯಕೃತ್ತು ಸರಿಯಾಗಿ ಕಾರ್ಯನಿರ್ವಹಿಸದೇ ಇರುವುದರಿಂದ ಬಾಬಾ ಅವರ ಆರೋಗ್ಯ ಕ್ಷೀಣಿಸಿದೆ.

ಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಸುಮಾರು ಎರಡು ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಬಾಬಾ ಅವರು ಚಿಕಿತ್ಸೆ ಪಡೆಯುತ್ತಿರುವ ಸತ್ಯ ಸಾಯಿ ಉನ್ನತ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸುತ್ತಲೂ ಬಿಗಿ ಭದ್ರತೆ ಏರ್ಪಡಿಸಲಾಗಿದೆ.

ರಾಜ್ಯದ ಪೊಲೀಸ್ ಮಹಾ ನಿರ್ದೇಶಕ ಅರವಿಂದ ರಾವ್ ಅವರು ಹೈದರಾಬಾದ್‌ನಲ್ಲಿ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಅವ ರನ್ನು ಭೇಟಿ ಮಾಡಿ ಪುಟ್ಟಪರ್ತಿಯಲ್ಲಿ ಏರ್ಪಡಿಸಲಾಗಿರುವ ಭದ್ರತೆ ಬಗ್ಗೆ ಮಾಹಿತಿ ನೀಡಿದರು.

ಬೃಹತ್ ಕೈಗಾರಿಕೆ ಗಳ ಸಚಿವೆ ಜೆ.ಗೀತಾ ರೆಡ್ಡಿ, ಅನಂತಪುರ ಜಿಲ್ಲಾಧಿಕಾರಿ ಬಿ.ಜನಾರ್ಧನ ರೆಡ್ಡಿ ಮತ್ತು ರಾಜ್ಯ ಪೊಲೀಸ್ ಮಹಾ ನಿರೀಕ್ಷಕ ಚಾರು ಸಿನ್ಹ ಅವರು ಪುಟ್ಟಪರ್ತಿಯಲ್ಲಿಯೇ ಮೊಕ್ಕಾಂ ಹೂಡಿದ್ದು, ಬಾಬಾ ಆರೋಗ್ಯದ ಸ್ಥಿತಿಗತಿಗಳ ಬಗ್ಗೆ ಗಮನ ಹರಿಸಿದ್ದಾರೆ. ಜತೆಗೆ ಕಾನೂನು ಸುವ್ಯವಸ್ಥೆಯ ಬಗ್ಗೆಯೂ ಪರಿಶೀಲನೆ ನಡೆಸಿದರು.

ಸತ್ಯ ಸಾಯಿ ಉನ್ನತ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸುತ್ತಲೂ ನಿಷೇಧಾಜ್ಞೆ ವಿಧಿಸಿರುವುದರಿಂದ ಈ ಪ್ರದೇಶದಲ್ಲಿನ ಅಂಗಡಿ ಮುಂಗಟ್ಟುಗಳು ಮುಚ್ಚಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಅನಂತಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಹನಾವಾಜ್ ಖಾಸಿಂ ಅವರು ಸ್ಥಳದಲ್ಲಿಯೇ ಇದ್ದು, ಭದ್ರತೆಯ ಮೇಲ್ವಿಚಾರಣೆ ನೋಡಿಕೊಳ್ಳುತ್ತಿದ್ದಾರೆ.

ಬಾಬಾ ಅವರ ಆರೋಗ್ಯ ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ ಸತ್ಯ ಸಾಯಿ ಕೇಂದ್ರ ಟ್ರಸ್ಟ್‌ನ ಸದಸ್ಯರು ಸಭೆ ನಡೆಸಿ, ಟ್ರಸ್ಟ್‌ನ ವ್ಯವಹಾರದ ಬಗ್ಗೆ ಚರ್ಚಿಸಿದರು.

ಸಭೆಯಲ್ಲಿ ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ (ಹಣಕಾಸು) ಎಲ್.ವಿ.ಸುಬ್ರಹ್ಮಣ್ಯ ಅವರೂ ಪಾಲ್ಗೊಂಡಿದ್ದರು.
 
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.