
ಪ್ರಜಾವಾಣಿ ವಾರ್ತೆ
ನವದೆಹಲಿ: ‘ಖಾಸಗಿತನದ ಹಕ್ಕು ಮೂಲಭೂತ ಹಕ್ಕು’ ಎಂದು ಬಗ್ಗೆ ಸುಪ್ರೀಂಕೋರ್ಟ್ ಗುರುವಾರ ತೀರ್ಪು ನೀಡಿದೆ.
‘ಸಂವಿಧಾನದ 21ನೇ ವಿಧಿಯಡಿ ಖಾಸಗಿತನದ ಹಕ್ಕನ್ನು ಮೂಲಭೂತ ಹಕ್ಕು ಎಂದು ಪರಿಗಣಿಸಬಹುದು’ ಎಂದು ನ್ಯಾಯಮೂರ್ತಿ ಜೆ. ಚಲಮೇಶ್ವರ್ ತಿಳಿಸಿದ್ದಾರೆ.
‘ಖಾಸಗಿತನದ ಹಕ್ಕು ಮೂಲಭೂತ ಹಕ್ಕೇ’ ಎಂಬ ಬಗ್ಗೆ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ಜೆ.ಎಸ್. ಖೇಹರ್ ನೇತೃತ್ವದ ಒಂಬತ್ತು ನ್ಯಾಯಮೂರ್ತಿಗಳ ಸಂವಿಧಾನ ಪೀಠ ಆಗಸ್ಟ್ 2ರಂದು ತೀರ್ಪನ್ನು ಕಾಯ್ದಿರಿಸಿತ್ತು.
ಖಾಸಗಿತನದ ಹಕ್ಕನ್ನು ಮೂಲಭೂತ ಹಕ್ಕು ಎಂದು ಪರಿಗಣಿಸಬೇಕೇ ಬೇಡವೇ ಎಂಬ ವಿಚಾರವಾಗಿ ನ್ಯಾಯಪೀಠವು ಮೂರು ವಾರಗಳಲ್ಲಿ ಆರು ದಿನಗಳ ಕಾಲ ಸುದೀರ್ಘ ವಿಚಾರಣೆ ನಡೆಸಿತ್ತು.
ಇವನ್ನೂ ಓದಿ...
ಇದೊಂಚೂರು ಖಾಸಗಿ...
ಖಾಸಗಿತನದ ರಕ್ಷಣೆ ‘ಸೋಲುತ್ತಿರುವ ಯುದ್ಧ’
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.