ADVERTISEMENT

ಗಂಗಾ ನದಿ: ದೋಣಿ ಮುಳುಗಿ ನಾಲ್ಕು ಸಾವು, 40 ಜನ ನಾಪತ್ತೆ

​ಪ್ರಜಾವಾಣಿ ವಾರ್ತೆ
Published 14 ಜೂನ್ 2013, 10:11 IST
Last Updated 14 ಜೂನ್ 2013, 10:11 IST

ಮಾಲ್ಡಾ (ಪಿಟಿಐ): ಗಂಗಾ ನದಿಯಲ್ಲಿ ದೋಣಿ  ಮುಳುಗಿ ಮಹಿಳೆ ಸೇರಿದಂತೆ ನಾಲ್ಕು ಜನರು ಸಾವನ್ನಪ್ಪಿದ್ದು 40ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿರುವ ಘಟನೆ ಶುಕ್ರವಾರ ನಡೆದಿದೆ.

ಇಂದು ಬೆಳಗ್ಗೆ 7.30ರ ಸುಮಾರಿಗೆ ಈ ದುರಂತ ಸಂಭವಿಸಿದೆ. ದರಾಂಪುರದಿಂದ ಗಂಗಾನದಿ ಮಾರ್ಗವಾಗಿ ಚಾರ್ ಪ್ರದೇಶಕ್ಕೆ ದೋಣಿ ಸಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ದೋಣಿಯಲ್ಲಿ 60 ಜನರು ಪ್ರಯಾಣಿಸುತ್ತಿದ್ದು ಇವರೆಲ್ಲಾ ಕೂಲಿ ಕಾರ್ಮಿಕರು ಎಂದು ತಿಳಿದು ಬಂದಿದೆ.

ಈವರೆಗೂ ಮಹಿಳೆ ಸೇರಿದಂತೆ ನಾಲ್ವರ ಮೃತ ದೇಹಗಳನ್ನು ಹೊರತೆಗೆಯಲಾಗಿದೆ. ಎಂಟು ಜನರನ್ನು ರಕ್ಷಿಸಲಾಗಿದ್ದು 40ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಪಶ್ಚಿಮ ಬಂಗಾಳದ ಪೊಲೀಸರು ತಿಳಿಸಿದ್ದಾರೆ.

ನಾಪತ್ತೆಯಾದವರ ಪತ್ತೆಗೆ ರಕ್ಷಣಾ ಪಡೆಯ ಹತ್ತು ತಂಡಗಳು ಶೋಧ ಕಾರ್ಯ ಮುಂದುವರೆಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT