
ಪ್ರಜಾವಾಣಿ ವಾರ್ತೆಕೊಟ್ಟಾಯಂ(ಪಿಟಿಐ): ಬಾಯಿಯಲ್ಲಿ ಕಚ್ಚಿ ಹಿಡಿದಿದ್ದ ಮೀನೊಂದು ಆಕಸ್ಮಿಕವಾಗಿ ಗಂಟಲಲ್ಲಿ ಇಳಿದು ವ್ಯಕ್ತಿಯೊಬ್ಬ ಉಸಿರುಗಟ್ಟಿ ಸಾವಿಗಿಡಾದ ಒಂದು ವಿಚಿತ್ರ ಘಟನೆ ಬುಧವಾರ ಇಲ್ಲಿ ನಡೆದಿದೆ ಎಂದು ಪೋಲಿಸರು ತಿಳಿಸಿದ್ದಾರೆ.
ಮಂಗಳವಾರ ಇಲ್ಲಿನ ಮಗಳ ಮನೆಗೆ ಬಂದಿದ್ದ ವ್ಯಕ್ತಿಯೊಬ್ಬ ಸ್ಥಳೀಯರ ಜೊತೆಗೂಡಿ ಮೀನು ಹಿಡಿಯಲು ಹೋದಾಗ ಈ ಘಟನೆ ನಡೆದಿದೆ.
ಆತ ಮೀನಿನ ಬೇಟೆಯಾಡುವಾಗ ಹಿಡಿದ ಮೀನುಗಳಲ್ಲೊಂದನ್ನು ಕೈಯಲ್ಲಿ ಹಿಡಿದಿದ್ದ ಮತ್ತೊಂದು ಮೀನನ್ನು ಹಲ್ಲಿನಲ್ಲಿ ಕಚ್ಚಿ ಹಿಡಿದಿದ್ದ. ಬಾಯಿಯಲ್ಲಿ ಕಚ್ಚಿ ಹಿಡಿದಿದ್ದ ಮೀನು ಜಾರಿ ಗಂಟಲಿನಲ್ಲಿ ಸಿಲುಕಿಕೊಂಡಿತು. ಉಸಿರುಗಟ್ಟಿ ಪ್ರಜ್ಞಾಹೀನನಾಗಿದ್ದ ಆತ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟನೆಂದು ಪೊಲೀಸರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.