ADVERTISEMENT

ಗಣಪತಿ ವಿಗ್ರಹಗಳ ಎತ್ತರ 15 ಅಡಿಗೆ ಸೀಮಿತ: ನಿರ್ಧಾರ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2012, 19:30 IST
Last Updated 23 ಏಪ್ರಿಲ್ 2012, 19:30 IST

ಮುಂಬೈ (ಐಎಎನ್‌ಎಸ್): ಗಣೇಶೋತ್ಸವ ಸಂದರ್ಭದಲ್ಲಿ ಗಣೇಶನ ವಿಗ್ರಹಗಳನ್ನು 15 ಅಡಿಗಿಂತ ಹೆಚ್ಚು ಎತ್ತರವಾಗಿ ನಿರ್ಮಿಸದಿರಲು ಇಲ್ಲಿಯ ಗಣೇಶೋತ್ಸವದ ಮೇಲ್ವಿಚಾರಣಾ ಸಮಿತಿ ನಿರ್ಧರಿಸಿದೆ.

ಸೆಪ್ಟೆಂಬರ್ 11ರಿಂದ 11 ದಿನಗಳ ಕಾಲ ಈ ಉತ್ಸವ ನಡೆಯಲಿದ್ದು, ಪರಿಸರ ಮಾಲಿನ್ಯ, ಸಂಚಾರ ದಟ್ಟಣೆ ಮುಂತಾದ ಸಮಸ್ಯೆಗಳ ಕಾರಣಕ್ಕಾಗಿ ಸ್ವಯಂಪ್ರೇರಣೆಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.
 ಎಂದು ಸಾರ್ವಜನಿಕ ಗಣೇಶೋತ್ಸವ ಸಮನ್ವಯ ಸಮಿತಿ ಅಧ್ಯಕ್ಷ ನರೇಶ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.