ADVERTISEMENT

ಗಣ್ಯರಿಗೆ ಪ್ರವೇಶ ನಿರ್ಬಂಧ: ಗೃಹ ಸಚಿವರ ಸೂಚನೆ

​ಪ್ರಜಾವಾಣಿ ವಾರ್ತೆ
Published 25 ಜೂನ್ 2013, 19:59 IST
Last Updated 25 ಜೂನ್ 2013, 19:59 IST

ಪಟ್ನಾ (ಪಿಟಿಐ): ಪ್ರಾಕೃತಿಕ ವಿಕೋಪಕ್ಕೆ ಸಿಲುಕಿ ನಲುಗಿದ ಉತ್ತರಾಖಂಡಕ್ಕೆ ಭೇಟಿ ನೀಡಲು ಗಣ್ಯರಿಗೆ ಅವಕಾಶ ನೀಡದಂತೆ ಕೇಂದ್ರ ಗೃಹ ಸಚಿವ ಸುಶೀಲಕುಮಾರ್ ಶಿಂಧೆ ಅವರು ಅಲ್ಲಿನ ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದಾರೆ.

`ಗಣ್ಯರ ಭೇಟಿ ಸಂದರ್ಭದಲ್ಲಿ ಭದ್ರತಾ ಪಡೆಗಳು ಅವರತ್ತ ಗಮನ ಹರಿಸಬೇಕಾಗುತ್ತದೆ. ಇದು ಪರಿಹಾರ ಕಾರ್ಯಕ್ಕೆ ಅಡ್ಡಿಯುಂಟು ಮಾಡಬಹುದು. ಹೀಗಾಗಿ ಮುಖ್ಯಮಂತ್ರಿ ವಿಜಯ ಬಹುಗುಣ ಹೊರತುಪಡಿಸಿ ಬೇರಾವ ಗಣ್ಯರೂ ಆ ರಾಜ್ಯದಲ್ಲಿ ಪ್ರವೇಶಿಸದಂತೆ ನೋಡಿಕೊಳ್ಳಿ ಎಂದು ನಾನು ಸಲಹೆ ಮಾಡಿದ್ದೇನೆ' ಎಂದು ಶಿಂಧೆ ಮಂಗಲವಾರ ಇಲ್ಲಿ ಸುದ್ದಿಗಾರಿಗೆ ತಿಳಿಸಿದರು. ತಮ್ಮ ಈ ಸಲಹೆಯನ್ನು ಬಹುತೇಕ ಎಲ್ಲ ಗಣ್ಯರೂ ಪಾಲಿಸಿದ್ದಾರೆ ಎಂದು ಅವರು ತೃಪ್ತಿ ವ್ಯಕ್ತಪಡಿಸಿದರು.

ಪ್ರವಾಹಕ್ಕೆ ಸಿಲುಕಿದ ಪ್ರದೇಶದ ವೈಮಾನಿಕ ಸಮೀಕ್ಷೆ ನಡೆಸಿದ ತಾವು ಸಹ ಎಲ್ಲೂ ಕೆಳಗೆ ಇಳಿಯಲಿಲ್ಲ ಎಂದು ಶಿಂಧೆ ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.