
ಪ್ರಜಾವಾಣಿ ವಾರ್ತೆಜಲಂಧರ್(ಪಿಟಿಐ): ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆಪಾದಿಸಿ ಗಾಂಧೀಜಿ ಅವರ ಮರಿಮೊಮ್ಮಗ ತುಷಾರ್ ಗಾಂಧಿ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಲಾಗಿದೆ.
ಉದ್ದೇಶಪೂರ್ವಕವಾಗಿ ಕೋಮು ದ್ವೇಷ ಮೂಡಿಸಲು ಪ್ರಯತ್ನಿಸಿದ್ದಾರೆ ಎಂದು ಆಪಾದಿಸಿ ಐಪಿಸಿ ಕಲಂ 295(ಎ) ಅನ್ವಯ ಪ್ರಕರಣ ದಾಖಲಿಸಲಾಗಿದೆ.
ಜನಜಾಗೃತಿ ಮಂಚ್ ಎಂಬ ಸ್ವಯಂ ಸೇವಾ ಸಂಸ್ಥೆಯ ಅಧ್ಯಕ್ಷ ಕಿಶನ್ ಲಾಲ್ ಅವರು ತುಷಾರ್ ವಿರುದ್ಧ ದೂರು ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.