ADVERTISEMENT

ಗಾಂಧಿ ಹತ್ಯೆ: ಮರುತನಿಖೆಗೆ ಕೋರಿದ್ದ ಅರ್ಜಿ ವಜಾ

ಪಿಟಿಐ
Published 28 ಮಾರ್ಚ್ 2018, 19:30 IST
Last Updated 28 ಮಾರ್ಚ್ 2018, 19:30 IST
ಗಾಂಧಿ ಹತ್ಯೆ: ಮರುತನಿಖೆಗೆ ಕೋರಿದ್ದ ಅರ್ಜಿ ವಜಾ
ಗಾಂಧಿ ಹತ್ಯೆ: ಮರುತನಿಖೆಗೆ ಕೋರಿದ್ದ ಅರ್ಜಿ ವಜಾ   

ನವದೆಹಲಿ: ಮಹಾತ್ಮ ಗಾಂಧಿ ಹತ್ಯೆ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಬುಧವಾರ ವಜಾಗೊಳಿಸಿದೆ.

ಮುಂಬೈನ ಅಭಿನವ್‌ ಭಾರತ್‌ ಸಂಘಟನೆಯ ಪಂಕಜ್‌ ಫಡ್ನಿಸ್‌ ಈ ಬಗ್ಗೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಎಸ್‌.ಎ. ಬೋಬ್ಡೆ ಮತ್ತು ಎಲ್‌. ನಾಗೇಶ್ವರ್‌ರಾವ್‌ ಅವರಿದ್ದ ಪೀಠವು ವಿಚಾರಣೆ ನಡೆಸಿತು.

’ಗಾಂಧೀಜಿ ಮೇಲೆ ಮೂರು ಗುಂಡುಗಳನ್ನು ಹಾರಿಸಿ ಹತ್ಯೆ ಮಾಡಲಾಗಿದೆ ಎಂದು ಅಭಿಪ್ರಾಯಪಟ್ಟಿದ್ದ ವಿವಿಧ ನ್ಯಾಯಾಲಯಗಳು, ನಾಥುರಾಮ್‌ ಗೋಡ್ಸೆ ಮತ್ತು ನಾರಾಯಣ್‌ ಅಪ್ಟೆ ಅವರನ್ನು ಅಪರಾಧಿಗಳನ್ನಾಗಿ ಪರಿಗಣಿಸಿ ಗಲ್ಲಿಗೇರಿಸಲಾಯಿತು. ಆದರೆ, ನಾಲ್ಕನೇ ಗುಂಡು ಹಾರಿಸಲಾಯಿತೇ ಎನ್ನುವ ಬಗ್ಗೆ ಪರಿಶೀಲನೆ ನಡೆಸುವ ಅಗತ್ಯವಿದೆ. ಈ ಗುಂಡನ್ನು ಬೇರೊಬ್ಬರು ಹಾರಿಸಿರುವ ಸಾಧ್ಯತೆ ಇದೆ’ ಎಂದು ಫಡ್ನಿಸ್‌ ಅರ್ಜಿಯಲ್ಲಿ ವಿವರಿಸಿದ್ದರು.

ADVERTISEMENT

‘1969ರಲ್ಲಿ ಕಪೂರ್‌ ಆಯೋಗ ನೀಡಿದ್ದ ವರದಿಯಲ್ಲೂ ವಿನಾಯಕ ದಾಮೋದರ್‌ ಸಾವರ್ಕರ್‌ ಅವರ ವಿರುದ್ಧ ಆಧಾರವಿಲ್ಲದ ಮತ್ತು ನಕಾರಾತ್ಮಕ ಹೇಳಿಕೆಗಳನ್ನು ಉಲ್ಲೇಖಿಸಲಾಗಿದೆ. ಇದರಿಂದ ಮರಾಠ ಸಮುದಾಯದ ವರ್ಚಸ್ಸಿಗೆ ಧಕ್ಕೆಯಾಗಿದೆ. ಹೀಗಾಗಿ ಆ ಹೇಳಿಕೆಗಳನ್ನು ತೆಗೆದು ಹಾಕಬೇಕು’ ಎಂದು ಅರ್ಜಿಯಲ್ಲಿ ಕೋರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.