ADVERTISEMENT

ಗಾಂಧಿ ಹತ್ಯೆ ಲಾಭ ಪಡೆದ ಕಾಂಗ್ರೆಸ್‌: ಉಮಾಭಾರತಿ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2017, 19:30 IST
Last Updated 12 ಅಕ್ಟೋಬರ್ 2017, 19:30 IST
ಉಮಾ ಭಾರತಿ
ಉಮಾ ಭಾರತಿ   

ಅಹಮದಾಬಾದ್‌: ’ಮಹಾತ್ಮಾ ಗಾಂಧಿ ಹತ್ಯೆಯ ಲಾಭವನ್ನು ಕಾಂಗ್ರೆಸ್‌ ಪಡೆದುಕೊಂಡಿದೆ’ ಎಂದು ಕೇಂದ್ರ ಸಚಿವೆ ಉಮಾಭಾರತಿ ಆರೋಪಿಸಿದ್ದಾರೆ.

ಗುಜರಾತ್‌ನಲ್ಲಿ ಗುರುವಾರ ನಡೆದ ‘ಗುಜರಾತ್‌ ಗೌರವ ಯಾತ್ರೆ’ಯ ಸಂದರ್ಭದಲ್ಲಿ ಮಾತನಾಡಿದ ಅವರು, ‘ದೇಶಕ್ಕೆ ಸ್ವಾತಂತ್ರ್ಯ ದೊರೆತ ಬಳಿಕ ಕಾಂಗ್ರೆಸ್‌ ಪಕ್ಷವನ್ನು ವಿಸರ್ಜಿಸಬೇಕು ಎಂದು ಗಾಂಧಿ ಬಯಸಿದ್ದರು. ಆದರೆ, ಅದು ಸಾಧ್ಯವಾಗಲಿಲ್ಲ. ಹೀಗಾಗಿಯೇ ಗಾಂಧಿ ಹತ್ಯೆಯ ಲಾಭವನ್ನು ಕಾಂಗ್ರೆಸ್‌ ಪಡೆದುಕೊಂಡಿತು’ ಎಂದು ತಿಳಿಸಿದ್ದಾರೆ.

ಗಾಂಧಿ ಹತ್ಯೆ ಪ್ರಕರಣದ ಮರು ತನಿಖೆ ಸಂಬಂಧ ಸಲ್ಲಿಸಲಾಗಿರುವ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಿಚಾರಣೆಗೆ ಕೈಗೆತ್ತಿಕೊಂಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ‘ಈ ವಿಷಯದ ಬಗ್ಗೆ ಗಾಂಧಿ ಹತ್ಯೆಯಾದ ದಿನದಿಂದ ಚರ್ಚೆಯಾಗುತ್ತಿದೆ. ಹತ್ಯೆ ಪ್ರಕರಣದಿಂದ ಸಂಘ ಪರಿವಾರ ಮತ್ತು ಜನಸಂಘಕ್ಕೆ ಮಾತ್ರ ಸಾಕಷ್ಟು ಹಾನಿ ಮಾಡಲಾಗಿದೆ. ದೇಶಕ್ಕೂ ನಷ್ಟವಾಯಿತು’ ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.