ADVERTISEMENT

ಗಿಲಾನಿಯಿಂದ ನ್ಯಾಯಾಂಗ ನಿಂದನೆ: ವಿಎಚ್‌ಪಿ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2012, 19:30 IST
Last Updated 1 ನವೆಂಬರ್ 2012, 19:30 IST

ಜಮ್ಮು (ಐಎಎನ್‌ಎಸ್): ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ವಿರುದ್ಧ ಹೇಳಿಕೆ ನೀಡಿ ಪ್ರತ್ಯೇಕತಾವಾದಿ ಸೈಯದ್ ಅಲಿ ಷಾ ಗಿಲಾನಿ ನ್ಯಾಯಾಂಗ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿರುವ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ), ಗಿಲಾನಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.

ಈ ವರ್ಷದ ಅಮರನಾಥ ಯಾತ್ರೆಯ ಸಂದರ್ಭದಲ್ಲಿ 100ಕ್ಕೂ ಅಧಿಕ ಯಾತ್ರಿಕರು ಮೃತಪಟ್ಟಿರುವುದನ್ನು ಪರಿಗಣನೆಗೆ ತೆಗೆದುಕೊಂಡಿದ್ದ ಸುಪ್ರೀಂಕೋರ್ಟ್, ಅಲ್ಲಿ ಮೂಲಸೌಕರ್ಯ ಒದಗಿಸಲು ನಿರ್ದೇಶಿಸಿತ್ತು.

ಆದರೆ, ಅಮರನಾಥ ಗುಹೆಗೆ ತೆರಳುವ ದಾರಿಯಲ್ಲಿ ಲೋಹಗಳನ್ನು ಬಳಸಿ ರಸ್ತೆ ನಿರ್ಮಿಸುವುದಕ್ಕೆ ಮತ್ತು ಕಟ್ಟಡ ಕಾಮಗಾರಿ ಆರಂಭಿಸುವುದಕ್ಕೆ ಗಿಲಾನಿ ವಿರೋಧಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.