ADVERTISEMENT

ಗುಜರಾತ್‌ಗೆ ಇಂದು ಪ್ರಧಾನಿ ಮೋದಿ

ಪಿಟಿಐ
Published 15 ಅಕ್ಟೋಬರ್ 2017, 19:30 IST
Last Updated 15 ಅಕ್ಟೋಬರ್ 2017, 19:30 IST

ಅಹಮದಾಬಾದ್‌: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ತವರು ರಾಜ್ಯ ಗುಜರಾತ್‌ಗೆ ಭೇಟಿ ನೀಡಲಿದ್ದಾರೆ.

ಗಾಂಧಿನಗರದ ಬಳಿ ಗ್ರಾಮದಲ್ಲಿ ಆಯೋಜಿಸಲಾಗಿರುವ ‘ಗುಜರಾತ್‌ ಗೌರವ ಮಹಾಸಮ್ಮೇಳನ’ದಲ್ಲಿ ಏಳು ಲಕ್ಷಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಬಿಜೆಪಿ ರಾಜ್ಯದಾದ್ಯಂತ ಹಮ್ಮಿಕೊಂಡಿದ್ದ ಬಿಜೆಪಿ ಗೌರವ ಯಾತ್ರೆ ನಾಳೆ ಸಮಾವೇಶಗೊಳ್ಳಲಿದೆ. ಮುಂಬರುವ ಚುನಾವಣೆ ಲಕ್ಷ್ಯದಲ್ಲಿಟ್ಟುಕೊಂಡು ಮೋದಿ ಅವರು ಗುಜರಾತ್‌ಗೆ ಭಾರಿ ಕೊಡುಗೆ ಘೋಷಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇದಕ್ಕಾಗಿಯೇ ಚುನಾವಣಾ ಆಯೋಗ ಕೇವಲ ಹಿಮಾಚಲ ಪ್ರದೇಶ ಚುನಾವಣಾ ವೆಳಾಪಟ್ಟಿ ಪ್ರಕಟಿಸಿ, ಗುಜರಾತ್‌ ವಿಧಾನಸಭೆಯ ಚುನಾವಣೆ ದಿನಾಂಕ ಪ್ರಕಟಿಸಿಲ್ಲ ಎಂದು ಕಾಂಗ್ರೆಸ್‌ ಆರೋಪಿಸಿದೆ.ಈ ಹಿನ್ನೆಲೆಯಲ್ಲಿ ಪ್ರಧಾನಿಯ ಸೋಮವಾರದ ಗುಜರಾತ್‌ ಭೇಟಿ ಭಾರಿ ಮಹತ್ವ ಪಡೆದುಕೊಂಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.