ಅಹಮದಾಬಾದ್ (ಪಿಟಿಐ): ಗುಜರಾತ್ನ ಕೆಲ ಭಾಗಗಳಲ್ಲಿ ಗುರುವಾರ ರಾತ್ರಿ 5.3ರಷ್ಟು ತೀವ್ರತೆಯ ಭೂಕಂಪನ ಸಂಭವಿಸಿದೆ.
ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ಹಾನಿಯಾದ ವರದಿಯಾಗಿಲ್ಲ. ಮುಂಬೈ, ಅಹಮದಾಬಾದ್ ಸೇರಿದಂತೆ ವಿವಿಧ ನಗರಗಳಲ್ಲಿ ಕಂಪನದ ಅನುಭವವಾಗಿದೆ. 10.48ಕ್ಕೆ ಸಂಭವಿಸಿದ ಈ ಭೂಕಂಪನದ ಕೇಂದ್ರ ಬಿಂದು ಜುನಾಗಡ ಜಿಲ್ಲೆಯ ಸಸನ್ಗಿರ್ ಎಂಬಲ್ಲಿ ಇತ್ತು.
ಸುಮಾರು 25 ಸೆಕೆಂಡುಗಳ ಕಾಲ ಭೂಮಿ ಕಂಪಿಸಿದ್ದರಿಂದ ಭೀತರಾದ ಜನ ಮನೆಗಳಿಂದ ಹೊರಗೋಡಿ ಬಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.