ADVERTISEMENT

ಗುಜರಾತ್‌ ಸಿ.ಎಂ: ಹೊರಬೀಳದ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2016, 19:30 IST
Last Updated 2 ಆಗಸ್ಟ್ 2016, 19:30 IST
ಗುಜರಾತ್‌ ಸಿ.ಎಂ: ಹೊರಬೀಳದ ನಿರ್ಧಾರ
ಗುಜರಾತ್‌ ಸಿ.ಎಂ: ಹೊರಬೀಳದ ನಿರ್ಧಾರ   

ನವದೆಹಲಿ: ಗುಜರಾತ್‌ನ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲು ಬಿಜೆಪಿ ನಾಯಕರು ಇನ್ನೂ ಕೆಲವು ದಿನಗಳನ್ನು ತೆಗೆದುಕೊಳ್ಳುವ ಸಾಧ್ಯತೆಯಿದೆ. ಆನಂದಿಬೆನ್‌ ಪಟೇಲ್‌ ಅವರ ಉತ್ತರಾಧಿಕಾರಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.

ಇದೇ ವೇಳೆ ಪಕ್ಷವು ಗುಜರಾತ್‌ನ ಬಿಜೆಪಿ ನಾಯಕರ ಅಭಿಪ್ರಾಯ ತಿಳಿದುಕೊಳ್ಳಲು ಇಬ್ಬರು ಸದಸ್ಯರ ಸಮಿತಿಯನ್ನು ಅಹಮದಾಬಾದ್‌ಗೆ ಕಳುಹಿಸಲು ನಿರ್ಧರಿಸಿದೆ.ಗುಜರಾತ್‌ ಬಿಜೆಪಿ ಉಸ್ತುವಾರಿ ದಿನೇಶ್‌ ಶರ್ಮಾ ಮತ್ತು ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ವಿ. ಸತೀಶ್‌ ಬುಧವಾರ ಅಹಮದಾಬಾದ್‌ಗೆ ತೆರಳಿ ರಾಜ್ಯ ಘಟಕದ ಪದಾಧಿಕಾರಿಗಳು, ಶಾಸಕರು ಮತ್ತು ಆನಂದಿಬೆನ್‌ ಪಟೇಲ್‌ ಅವರ ಜತೆ ಮಾತುಕತೆ ನಡೆಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.