ADVERTISEMENT

ಗೋಧ್ರಾ ಗಲಭೆ: ಮೋದಿ ವಿಚಾರಣೆಗೆ ಸಿಪಿಎಂ ಆಗ್ರಹ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2011, 19:00 IST
Last Updated 23 ಏಪ್ರಿಲ್ 2011, 19:00 IST

ನವದೆಹಲಿ (ಪಿಟಿಐ): 2002ರ ಗೋಧ್ರಾ ನಂತರದ ಗಲಭೆಯಲ್ಲಿ ಗುಜರಾತ್‌ ಮುಖ್ಯಮಂತ್ರಿ ನರೇಂದ್ರ ಮೋದಿ ಅವರ ಪಾತ್ರದ ಕುರಿತು ತಕ್ಷಣ ವಿಚಾರಣೆ ನಡೆಸಬೇಕು ಎಂದು ಒತ್ತಾಯಿಸಿರುವ ಸಿಪಿಎಂ, `ರಾಜ್ಯದ ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರ ಆರೋಪದ ಹಿನ್ನೆಲೆಯಲ್ಲಿ ಮೋದಿ ಅವರನ್ನು ಶಿಕ್ಷಿಸಬೇಕು~ ಎಂದು ಆಗ್ರಹಿಸಿದೆ.

ಪೊಲೀಸ್‌ ಅಧಿಕಾರಿ ಸಂಜೀವ್‌ ಭಟ್‌ ಅವರು ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ `ಹಿರಿಯ ಪೊಲೀಸ್‌ ಅಧಿಕಾರಿಗಳ ಸಭೆಯಲ್ಲಿ ಹಿಂಸಾಚಾರಕ್ಕೆ ಒಳಗಾದ ಮುಸ್ಲಿಮರನ್ನು ರಕ್ಷಿಸದಂತೆ ಮೋದಿ ಆದೇಶ ನೀಡಿರುವ ವಿಷಯವನ್ನು ಬಹಿರಂಗಪಡಿಸಿದ್ದು, ಈ ಹೇಳಿಕೆ ಅವರ ಅಪರಾಧಿತನವನ್ನು ದೃಢಪಡಿಸಿದೆ~ ಎಂದು ಸಿಪಿಎಂ ಪಾಲಿಟ್‌ ಬ್ಯೂರೋ ಶನಿವಾರ ಇಲ್ಲಿ ನೀಡಿರುವ ಹೇಳಿಕೆಯಲ್ಲಿ ಟೀಕಿಸಿದೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.