ನಾಗಪುರ: ಜುನೈದ್ ಪ್ರಕರಣ ಮಾಸುವ ಮುನ್ನವೇ ಗೋಮಾಂಸ ಸಾಗಣೆ ಮಾಡುತ್ತಿದ್ದಾರೆಂದು ಆರೋಪಿಸಿ ಮುಸ್ಲಿಂ ವ್ಯಕ್ತಿಯೊಬ್ಬರ ಮೂರ್ನಾಲ್ಕು ಮಂದಿ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.
ಮಹಾರಾಷ್ಟ್ರದ ನಾಗಪುರ ಸಮೀಪದ ಭಾರ್ಸಿಂಗಿ ಎಂಬಲ್ಲಿ ಸಲೀಮ್ ಶಾ ಎಂಬುವರ ಮೇಲೆ ಬುಧವಾರ ಹಲ್ಲೆ ನಡೆದಿದೆ. ಈ ಹಲ್ಲೆಯ ವಿಡಿಯೊ ಈಗ ವೈರಲ್ ಆಗಿದೆ. ಸಲೀಮ್ ಅವರನ್ನು ಕೆಳಗೆ ತಳ್ಳಿ ಮೂರ್ನಾಲ್ಕು ಮಂದಿ ಕಾಲಿನಿಂದ ಒದ್ದಿರುವ ದೃಶ್ಯಗಳು ವಿಡಿಯೊದಲ್ಲಿ ಸೆರೆಯಾಗಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.