ADVERTISEMENT

ಗೋರಕ್ಷಣೆ ಹೆಸರಲ್ಲಿ ನಡೆಯುವ ಎಲ್ಲ ಅಹಿತಕರ ಘಟನೆಗಳ ಮೇಲೆ ಎಫ್‌ಐಆರ್‌ ದಾಖಲಿಸಿ: ಕೇಂದ್ರ ಸರ್ಕಾರ ಸೂಚನೆ

ಏಜೆನ್ಸೀಸ್
Published 18 ಜುಲೈ 2017, 13:47 IST
Last Updated 18 ಜುಲೈ 2017, 13:47 IST
ಗೋರಕ್ಷಣೆ ಹೆಸರಲ್ಲಿ ನಡೆಯುವ ಎಲ್ಲ ಅಹಿತಕರ ಘಟನೆಗಳ ಮೇಲೆ ಎಫ್‌ಐಆರ್‌ ದಾಖಲಿಸಿ: ಕೇಂದ್ರ ಸರ್ಕಾರ ಸೂಚನೆ
ಗೋರಕ್ಷಣೆ ಹೆಸರಲ್ಲಿ ನಡೆಯುವ ಎಲ್ಲ ಅಹಿತಕರ ಘಟನೆಗಳ ಮೇಲೆ ಎಫ್‌ಐಆರ್‌ ದಾಖಲಿಸಿ: ಕೇಂದ್ರ ಸರ್ಕಾರ ಸೂಚನೆ   

ನವದೆಹಲಿ: ಗೋರಕ್ಷಣೆ ಹೆಸರಲ್ಲಿ ನಡೆಯುವ ಎಲ್ಲ ಅಹಿತಕರ ಘಟನೆಗಳ ಮೇಲೆ ಎಫ್‌ಐಆರ್‌ ದಾಖಲಿಸುವಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.

ಲೋಕಸಭೆಯಲ್ಲಿ ಮಾತನಾಡಿದ ಗೃಹಖಾತೆ ರಾಜ್ಯ ಸಚಿವ ಹನ್ಸರಾಜ್‌ ಅಹಿರ್‌ ‘ಗೋರಕ್ಷಣೆ ಹೆಸರಿನಲ್ಲಿ  ಮುಸ್ಲಿಮರು ಮತ್ತು ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು ಖಂಡನೀಯ ಎಂದರು. ಇಂತಹ ಪ್ರಕರಣಗಳ ವಿರುದ್ಧ ರಾಜ್ಯ ಸರ್ಕಾರ ಎಫ್‌ಐಆರ್‌ ದಾಖಲಿಸಬೇಕು ಎಂದು ಅವರು ಸೂಚಿಸಿದರು.

ಕಳೆದ ಎರಡು ದಿನಗಳ ಹಿಂದೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ನಡೆಸುವುದನ್ನು ಕೇಂದ್ರ ಸರ್ಕಾರ ಸಹಿಸುವುದಿಲ್ಲ, ಅಂತಹವರ ವಿರುದ್ಧ ರಾಜ್ಯಸ ರ್ಕಾರಗಳು ಕಠಿಣ ಕ್ರಮಕೈಗೊಳ್ಳಬೇಕು ಎಂದು ಹೇಳಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.