ADVERTISEMENT

ಗೋವಾ: ಕಟ್ಟಡ ಕುಸಿತ, 14 ಸಾವು

​ಪ್ರಜಾವಾಣಿ ವಾರ್ತೆ
Published 4 ಜನವರಿ 2014, 19:30 IST
Last Updated 4 ಜನವರಿ 2014, 19:30 IST

ಪಣಜಿ(ಪಿಟಿಐ): ಮೂರು ಮಹಡಿ­ಯ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದ ಪರಿಣಾಮ ಒಟ್ಟು ಹದಿನಾಲ್ಕು ಜನ ಕಾರ್ಮಿಕರು ಮೃತಪಟ್ಟ ದಾರುಣ ಘಟನೆ ಸಮೀಪ­ದ ಕಾಣಕೋಣ್‌ ಪಟ್ಟಣದಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.

ಕಟ್ಟಡದ ಅವಶೇಷಗಳ ಅಡಿ­ಯಲ್ಲಿ ಇನ್ನು 20–30 ಕಾರ್ಮಿಕರು ಸಿಲುಕಿರುವ ಬಗ್ಗೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.

ಮಧ್ಯಾಹ್ನ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಕಟ್ಟಡದಲ್ಲಿ ಎಷ್ಟು ಜನರು ಸಿಲುಕಿಕೊಂಡಿದ್ದಾರೆ ಎಂಬ ಸ್ಟಷ್ಟ ಮಾಹಿತಿ ಸಿಕ್ಕಿಲ್ಲ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶೇಖರ್‌ ಪ್ರಭುದೇಸಾಯಿ ತಿಳಿಸಿದರು.

ಕಟ್ಟಡ ನಿರ್ಮಾಣದಲ್ಲಿ 50ಕ್ಕೂ ಹೆಚ್ಚು ಜನರು ಕೆಲಸ ಮಾಡುತ್ತಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.