ADVERTISEMENT

ಘರ್ಷಣೆ: ಅಲಹಾಬಾದ್ ವಿಶ್ವವಿದ್ಯಾಲಯ ಬಂದ್

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2012, 19:30 IST
Last Updated 27 ಏಪ್ರಿಲ್ 2012, 19:30 IST

ಅಲಹಾಬಾದ್(ಪಿಟಿಐ): ಇಲ್ಲಿನ  ಅಲಹಾಬಾದ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ನಿಲಯದಲ್ಲಿ ಶೈಕ್ಷಣಿಕ ವರ್ಷ ಮುಗಿದ ನಂತರವೂ ಅಲ್ಲಿಯೇ ನೆಲೆಸಿದ್ದ ವಿದ್ಯಾರ್ಥಿಗಳನ್ನು ಹೊರ ಹಾಕಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಗುರುವಾರ ರಾತ್ರಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮತ್ತು ಪೊಲೀಸರ ನಡುವೆ  ಘರ್ಷಣೆ  ನಡೆದು  ವಿವಿಯನ್ನು ಸೋಮವಾರದವರೆಗೆ ಮುಚ್ಚಲಾಗಿದೆ ಎಂದು ವಿವಿ ಮುಖ್ಯ ಅಧಿಕಾರಿ ಮಾತಾ ಅಂಬರ್ ತಿವಾರಿ ಹೇಳಿದ್ದಾರೆ.

ಅಕ್ರಮವಾಗಿ ನೆಲೆಸಿದ್ದ ವಿದ್ಯಾರ್ಥಿಗಳನ್ನು ಹೊರ ಹಾಕಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ವಿದ್ಯಾರ್ಥಿಗಳು ಹಿಂಸಾಚಾರದಲ್ಲಿ ತೊಡಗಿದ್ದರು. ಅವರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ಮಾಡಿದಾಗ 20 ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ.

ಹಿನ್ನೆಲೆ: ವಿಶ್ವವಿದ್ಯಾಲಯ ನಿಯಮದ ಪ್ರಕಾರ ಶೈಕ್ಷಣಿಕ ವರ್ಷ ಮುಗಿದ ನಂತರ ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯವನ್ನು ಖಾಲಿ ಮಾಡಬೇಕು. ಆದರೆ ಕಾಲಾವಧಿ ಮುಗಿದರೂ, ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ಸಿದ್ಧತೆಗಾಗಿ ಅನೇಕ ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯದಲ್ಲಿ ಇರಲು ಅವಕಾಶ ಕೋರಿದ್ದರು.

ADVERTISEMENT

ಅನುಮತಿ ಇಲ್ಲದಿದ್ದರೂ ಅಕ್ರಮವಾಗಿ ವಾಸ್ತವ್ಯ ಹೂಡಿದವರನ್ನು ಹೊರ ಹಾಕುವ ವಿಚಾರದಲ್ಲಿ ವಿವಿ ಆಡಳಿತ ದೃಢ ತೀರ್ಮಾನ ಕೈಗೊಂಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.