ADVERTISEMENT

ಚಂದ್ರಗ್ರಹಣ: ಇಂದು 17 ತಾಸು ತಿಮ್ಮಪ್ಪನ ದರ್ಶನ ಇಲ್ಲ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2013, 19:59 IST
Last Updated 24 ಏಪ್ರಿಲ್ 2013, 19:59 IST

ತಿರುಪತಿ (ಪಿಟಿಐ): ಚಂದ್ರಗ್ರಹಣ ಪ್ರಯುಕ್ತ ಗುರುವಾರ ಸಂಜೆ 5 ಗಂಟೆಯಿಂದ ಶುಕ್ರವಾರ ಬೆಳಿಗ್ಗೆ 10ಗಂಟೆಯ ತನಕ 17 ಗಂಟೆಗಳ ಕಾಲ ಭಕ್ತರಿಗೆ ತಿಮ್ಮಪ್ಪನ ದರ್ಶನ ರದ್ದುಪಡಿಸಲಾಗಿದೆ ಎಂದು ದೇವಸ್ಥಾನ ಮೂಲಗಳು  ಹೇಳಿವೆ.

ಸೂರ್ಯಾಸ್ತಕ್ಕಿಂತ ಒಂದು ಗಂಟೆಯ ಮೊದಲೇ ದೇವಸ್ಥಾನವನ್ನು ಮುಚ್ಚಲಾಗುತ್ತಿದ್ದು, ಶುಕ್ರವಾರ ಬೆಳಿಗ್ಗೆ 10 ಗಂಟೆಯ ನಂತರವೇ ಭಕ್ತರ ದರ್ಶನಕ್ಕೆ ತೆರೆಯಲಾಗುವುದು.

ಶುಕ್ರವಾರ ಬೆಳಗಿನ ಜಾವ 1.22 ರಿಂದ 1.55 ರ ಅವಧಿಯಲ್ಲಿ ಚಂದ್ರಗ್ರಹಣ ಸಂಭವಿಸಲಿದೆ ಎಂದು ತಿರುಪತಿ ತಿರುಮಲ ದೇವಸ್ಥಾನ ಟ್ರಸ್ಟ್‌ನ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.