ADVERTISEMENT

ಚೀನಾ–ಭಾರತ; 12 ಒಪ್ಪಂದಗಳಿಗೆ ಸಹಿ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2014, 9:32 IST
Last Updated 18 ಸೆಪ್ಟೆಂಬರ್ 2014, 9:32 IST

ನವದೆಹಲಿ (ಪಿಟಿಐ): ಮೂರು ದಿನಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿರುವ ಚೀನಾ ಅಧ್ಯಕ್ಷ ಜಿನ್‌ಪಿಂಗ್‌ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ 12 ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಿದರು.

ಕೈಲಾಸ ಮಾನಸ ಸರೋವರವನ್ನು ಪ್ರವಾಸೋಧ್ಯಮ ಕೇಂದ್ರವಾಗಿ ಅಭಿವೃದ್ಧಿಪಡಿಸುವುದು ಮತ್ತು ಉಭಯ ದೇಶಗಳ ನಡುವೆ ಮಾರ್ಗ ನಿರ್ಮಾಣ, ರೈಲ್ವೆ ಯೋಜನೆಗಳಲ್ಲಿ ಸಹಕಾರ, ಔಷಧಿ ಮತ್ತು ಸಾಂಸ್ಕೃತಿಕ ವಿನಿಮಯ ಯೋಜನೆಗಳು ಇದರಲ್ಲಿ ಸೇರಿವೆ.

ಮುಂಬೈ ಮತ್ತು ಶಾಂಘೈ ಮಹಾನಗರಗಳನ್ನು ಅವಳಿ ನಗರಗಳನ್ನಾಗಿ ಅಭಿವೃದ್ಧಿಪಡಿಸುವ ಯೋಜನೆಗೂ ಸಹಿ ಹಾಕುವ ಸಾಧ್ಯತೆಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT