ADVERTISEMENT

ಚುನಾವಣೆ: ಗೋವಾದಲ್ಲಿ ತರಾತುರಿಯಲ್ಲಿ ನೇಮಕಾತಿ

​ಪ್ರಜಾವಾಣಿ ವಾರ್ತೆ
Published 5 ಜನವರಿ 2012, 10:10 IST
Last Updated 5 ಜನವರಿ 2012, 10:10 IST

ಪಣಜಿ, ಗೋವಾ (ಪಿಟಿಐ): ವಿಧಾನ ಸಭೆಗೆ ಚುನಾವಣೆ ಘೋಷಣೆಯಾದ ನಂತರದಲ್ಲಿ ಆರು ಇಲಾಖೆಗಳ 416 ಹುದ್ದೆಗಳಿಗೆ ನೇಮಕಾತಿ ಆದೇಶವನ್ನು ಹೊರಡಿಸಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಚುನಾವಣಾ ಆಯೋಗವು ಆಕ್ಷೇಪ ವ್ಯಕ್ತಪಡಿಸಿದೆ.

ಗೋವಾದಲ್ಲಿ ವಿಧಾನಸಭೆಗೆ ಇದೇ ಮಾರ್ಚ್ 3ರಂದು ಚುನಾವಣೆ ನಡೆಯಲಿದೆ. ಅಲ್ಲಿ ಚುನಾವಣಾ ನೀತಿ ಸಂಹಿತೆಯು ಜಾರಿಯಲ್ಲಿರುವ ಕಾರಣ ಸರ್ಕಾರದ ನೇಮಕಾತಿ ಕ್ರಮ ತೀವ್ರ ಆಕ್ಷೇಪಕ್ಕೆ ಕಾರಣವಾಗಿದೆ.

~ರಾಜ್ಯ ಸರ್ಕಾರವು ನೇಮಕಾತಿ ಆದೇಶ ಹೊರಡಿಸಿರುವುದು, ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ. ಈ ನೇಮಕಾತಿ ಆದೇಶಗಳ ತಡೆಗೆ ಸೂಚಿಸಲಾಗಿದೆ. ಸಂಬಂಧಿಸಿದ ಇಲಾಖಾ ಮುಖ್ಯಸ್ಥರಿಗೂ ಸೂಕ್ತ ಕ್ರಮದ ಎಚ್ಚರಿಕೆಯನ್ನು ಕೂಡ ನೀಡಲಾಗಿದೆ~ ಎಂದು  ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ತಿಳಿಸಿದ್ದಾರೆ. 

 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.