ADVERTISEMENT

ಚುನಾವಣೆ ಮೇಲೆ ಕಣ್ಣು: ರಾಜಕೀಯ ಪಕ್ಷಗಳಿಂದ ಕೋಮು ಸಾಮರಸ್ಯ ಕದಡುವಿಕೆ-ಅಖಿಲೇಶ್

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2013, 10:33 IST
Last Updated 23 ಸೆಪ್ಟೆಂಬರ್ 2013, 10:33 IST

ಲಖನೌ (ಪಿಟಿಐ): ಕೆಲವು ರಾಜಕೀಯ ಪಕ್ಷಗಳು ಮುಂಬರುವ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು  ಕೋಮು ಸಾಮರಸ್ಯ ಕದಡುವ ಮೂಲಕ ಮತಬ್ಯಾಂಕ್ ಭದ್ರಪಡಿಸಿಕೊಳ್ಳಲು ಯತ್ನಿಸುತ್ತಿವೆ ಎಂದು ಉತ್ತರಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಸೋಮವಾರ ಗಂಭೀರ ಆರೋಪ ಮಾಡಿದ್ದಾರೆ.

ರಾಷ್ಟ್ರೀಯ ಭಾವೈಕ್ಯತಾ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದ ಅವರು ಕೋಮು ಗಲಭೆಯ ಲಾಭ ಪಡೆಯಲು ಕೆಲವು ಪಕ್ಷಗಳು ಯತ್ನಿಸುತ್ತಿವೆ ಎಂದು  ಆರೋಪಿಸಿದರು.

ಮುಜಾಫರ್‌ನಗರದ ಗಲಭೆಗೆ ಕಾರಣರಾದವರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಅಖಿಲೇಶ್ ತಿಳಿಸಿದರು.

ಸಾಮಾಜಿಕ ಜಾಲತಾಣಗಳು ಮತ್ತು ಮೊಬೈಲ್ ಸಂದೇಶಗಳು ಕೋಮುಗಲಭೆಗೆ ಪ್ರಚೋಧನೆ ನೀಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ ಈ ಬಗ್ಗೆ ಕೇಂದ್ರ ಸರ್ಕಾರ ನಿಗಾ ವಹಿಸಬೇಕು ಎಂದು ಅಖಿಲೇಶ್ ಯಾದವ್ ಒತ್ತಾಯಿಸಿದರು.

ಸಣ್ಣ ಸಣ್ಣ ವಿಚಾರಗಳು ಕೋಮು ಗಲಭೆಗೆ ಕಾರಣವಾಗುತ್ತಿವೆ. ಕ್ಷುಲಕ ವಿಚಾರಗಳನ್ನು ಜನರು ಗಂಭೀರವಾಗಿ ಪರಿಗಣಿಸದೆ ಎಲ್ಲರೂ ಸಾಮರಸ್ಯದಿಂದ ಬದುಕಬೇಕು ಎಂದು ಇದೇ ಸಂದರ್ಭದಲ್ಲಿ ಕರೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.