ADVERTISEMENT

ಚೆನ್ನೈ: ಪ್ರತಿಭಟನೆಗಳಿಗೆ ಸ್ಥಳ ನಿಗದಿ

ಪಿಟಿಐ
Published 26 ಏಪ್ರಿಲ್ 2018, 19:30 IST
Last Updated 26 ಏಪ್ರಿಲ್ 2018, 19:30 IST

ಚೆನ್ನೈ: ಪ್ರತಿಭಟನೆ, ರ್‍ಯಾಲಿ ನಡೆಸುವವರಿಗೆ ಚೆನ್ನೈ ನಗರ ಮತ್ತು ಉಪನಗರದಲ್ಲಿ 27 ಸ್ಥಳಗಳನ್ನು ತಮಿಳುನಾಡು ಪೊಲೀಸರು ನಿಗದಿ ಮಾಡಿದ್ದಾರೆ.

ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಆಗ್ರಹಿಸಿ ಮರೀನಾ ಬೀಚ್‌ನಲ್ಲಿ ಪ್ರತಿಭಟನೆ ನಡೆಸಲು ಅನುಮತಿ ನೀಡಬೇಕು ಎಂದು ರೈತ ಪರ ಹೋರಾಟಗಾರ ಪಿ. ಅಯ್ಯಕನ್ನು ಅವರು ಮದ್ರಾಸ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಬಳಿಕ ಪೊಲೀಸರು ಈ ಕ್ರಮಕ್ಕೆ ಮುಂದಾಗಿದ್ದಾರೆ.

ಅಯ್ಯಕನ್ನು ಅವರ ಅರ್ಜಿಗೆ ವಿರೋಧ ವ್ಯಕ್ತಪಡಿಸಿರುವ ಪೊಲೀಸರು ಯಾವುದೇ ರೀತಿಯ ಚಳವಳಿಗೆ ಮರೀನಾ ಬೀಚ್‌ ಸೂಕ್ತವಾದ ಸ್ಥಳವಲ್ಲ. ಅಲ್ಲಿ ಪ್ರತಿಭಟನೆ ವೇಳೆ ಅಹಿತಕರ ಘಟನೆಗಳು ನಡೆಯುವ ಸಾಧ್ಯತೆ ಇದೆ ಎಂದು ತಿಳಿಸಿದ್ದರು. ನಿಗದಿ ಮಾಡಿದ ಸ್ಥಳಗಳಲ್ಲಿ  ಮಾತ್ರ ಪ್ರತಿಭಟನೆ, ಉಪವಾಸ ಸತ್ಯಾಗ್ರಹ ಸೇರಿದಂತೆ ಯಾವುದೇ ರೀತಿಯ ಚಳವಳಿಗಳನ್ನು ಹಮ್ಮಿಕೊಳ್ಳಬಹುದು ಎಂದು ಪೊಲೀಸರು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.